ನನ್ನನ್ನು ಮುಟ್ಟಿದರೆ ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಸೂರಜ್ ಪಟೇಲ್ ಪೂರ್ವಾನುಮತಿ ಇಲ್ಲದೆ ಪೊಲೀಸ್ ಠಾಣೆಗೆ ಬಂದು ಆ ಸಮಯದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ಸುಹೈಲ್ ಎಂಬ ವ್ಯಕ್ತಿಯನ್ನು ಭೇಟಿಯಾಗಬೇಕೆಂದು ಹೇಳಿದರು. ಆಗ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ತನಿಖಾಧಿಕಾರಿ ಅಥವಾ ಕರ್ತವ್ಯ ಅಧಿಕಾರಿಯನ್ನು ಸಂಪರ್ಕಿಸುವಂತೆ ಸೂಚಿಸಿದ್ದಾರೆ. ಇದರಿಂದಾಗಿ ಅವರು ಆಕ್ರೋಶಗೊಂಡರು. ಬಳಿಕ ಪೊಲೀಸರಿಗೆ ಬೆದರಿಕೆ ಹಾಕಿದರು ಎನ್ನಲಾಗಿದೆ.
ರಾಂಪುರ, ಜನವರಿ 12: ಉತ್ತರ ಪ್ರದೇಶದ ರಾಂಪುರ ಜಿಲ್ಲೆಯ ಪೊಲೀಸ್ ಠಾಣೆಯೊಳಗೆ ಬಜರಂಗದಳದ ಕಾರ್ಯಕರ್ತ ಎಂದು ಹೇಳಿಕೊಂಡಿರುವ ವ್ಯಕ್ತಿಯೊಬ್ಬರು ಪೊಲೀಸ್ ಸಿಬ್ಬಂದಿಗೆ ಬೆದರಿಕೆ ಹಾಕುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Viral Video) ಆಗಿದೆ. ಸೂರಜ್ ಪಟೇಲ್ ಎಂಬ ವ್ಯಕ್ತಿ ಪೊಲೀಸ್ ಸಿಬ್ಬಂದಿಗೆ ಅವಾಚ್ಯ ಶಬ್ದಗಳನ್ನು ಬಳಸಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದಾರೆ. “ನನ್ನನ್ನು ಮುಟ್ಟಿ ನೋಡಿ, ಇಡೀ ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ” ಎಂದು ಹೇಳುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.
ಸೂರಜ್ ಪಟೇಲ್ ಪೂರ್ವಾನುಮತಿ ಇಲ್ಲದೆ ಪೊಲೀಸ್ ಠಾಣೆಗೆ ಬಂದು ಆ ಸಮಯದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ಸುಹೈಲ್ ಎಂಬ ವ್ಯಕ್ತಿಯನ್ನು ಭೇಟಿಯಾಗಬೇಕೆಂದು ಹಠ ಹಿಡಿದಾಗ ಅಲ್ಲಿದ್ದ ಪೊಲೀಸ್ ಸಿಬ್ಬಂದಿ ತನಿಖಾಧಿಕಾರಿ ಅಥವಾ ಕರ್ತವ್ಯ ಅಧಿಕಾರಿಯನ್ನು ಸಂಪರ್ಕಿಸಲು ಸೂಚಿಸಿದ್ದಾರೆ. ಇದರಿಂದ ಸೂರಜ್ ಆಕ್ರೋಶಗೊಂಡರು. ಈ ಘಟನೆಯನ್ನು ಸ್ಥಳದಲ್ಲಿದ್ದ ಯಾರೋ ಒಬ್ಬರು ರೆಕಾರ್ಡ್ ಮಾಡಿದ್ದಾರೆ. ಈ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿ ಆಕ್ರೋಶಕ್ಕೆ ಕಾರಣವಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ

