ಸತತ 5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ; ವಿಡಿಯೋ ನೋಡಿ
Digvesh Rathi's 5 Wickets in 5 Balls: ಐಪಿಎಲ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರ ಕಣಕ್ಕಿಳಿಯುವ ಯುವ ಸ್ಪಿನ್ನರ್ ದಿಗ್ವೇಶ್ ರಾಥಿ ಅವರು ಸ್ಥಳೀಯ ಟಿ20 ಪಂದ್ಯದಲ್ಲಿ ಅಸಾಧಾರಣ ಪ್ರದರ್ಶನ ನೀಡಿದ್ದಾರೆ. ಸತತ ಐದು ಎಸೆತಗಳಲ್ಲಿ ಐದು ವಿಕೆಟ್‌ಗಳನ್ನು ಪಡೆದು ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಲಕ್ನೋ ತಂಡದ ಮಾಲೀಕರು ಕೂಡಾ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
2025 ರ ಐಪಿಎಲ್‌ನಲ್ಲಿ ತನ್ನ ಪ್ರದರ್ಶನಕ್ಕಿಂತ ಹೆಚ್ಚಾಗಿ ಸಂಭ್ರಮಾಚಾರಣೆಯಿಂದಲೇ ಸಾಕಷ್ಟು ಬಾರಿ ದಂಡ ಕಟ್ಟಿದ್ದ ಯುವ ಸ್ಪಿನ್ನರ್ ದಿಗ್ವೇಶ್ ರಾಥಿ ಈ ಬಾರಿ ತಮ್ಮ ಅದ್ಭುತ ಬೌಲಿಂಗ್‌ನಿಂದಾಗಿ ಸುದ್ದಿಯಲ್ಲಿದ್ದಾರೆ. ಈ ಯುವ ಸ್ಪಿನ್ನರ್ ಸ್ಥಳೀಯ ಟಿ20 ಪಂದ್ಯದಲ್ಲಿ ಸತತ ಐದು 5 ವಿಕೆಟ್‌ಗಳನ್ನು ಪಡೆಯುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ. ಅವರು ವಿಕೆಟ್ ಪಡೆಯುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದು, ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕ ಸಂಜೀವ್ ಗೋಯೆಂಕಾ ಕೂಡ ಈ ವಿಡಿಯೋವನ್ನು ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಪಂದ್ಯದಲ್ಲಿ, ದಿಗ್ವೇಶ್ ರಾಥಿ ಕೇವಲ 5 ಎಸೆತಗಳಲ್ಲಿ ಅರ್ಧದಷ್ಟು ತಂಡವನ್ನು ಪೆವಿಲಿಯನ್‌ಗೆ ಕಳುಹಿಸಿದ್ದು, ಇದನ್ನು ನೋಡಿ ಎಲ್ಲರೂ ಆಶ್ಚರ್ಯಚಕಿತರಾಗಿದ್ದಾರೆ.
5 ಎಸೆತಗಳಲ್ಲಿ 5 ವಿಕೆಟ್
ಐಪಿಎಲ್‌ನಲ್ಲಿ ಲಕ್ನೋ ಪರ ಆಡುವ ಯುವ ಸ್ಪಿನ್ನರ್ ದಿಗ್ವೇಶ್ ರಥಿ ಸ್ಥಳೀಯ ಟಿ20 ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಮಾಡಿ ಸತತ ಐದು ಎಸೆತಗಳಲ್ಲಿ ಐದು ವಿಕೆಟ್‌ಗಳನ್ನು ಪಡೆಯುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದರು. ಅವರು ಕೇವಲ ಐದು ಎಸೆತಗಳಲ್ಲಿ ಅರ್ಧದಷ್ಟು ತಂಡವನ್ನು ಪೆವಿಲಿಯನ್‌ಗೆ ಕಳುಹಿಸಿದರು. ಇದಕ್ಕೂ ಮೊದಲು, ಶ್ರೀಲಂಕಾದ ಮಾಜಿ ವೇಗಿ ಲಸಿತ್ ಮಾಲಿಂಗ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ನಾಲ್ಕು ಎಸೆತಗಳಲ್ಲಿ ನಾಲ್ಕು ವಿಕೆಟ್‌ಗಳನ್ನು ಪಡೆದಿದ್ದರೆ, ದ್ವಿಗೇಶ್ ಸ್ಥಳೀಯ ಟಿ20 ಪಂದ್ಯದಲ್ಲಿ ಐದು ವಿಕೆಟ್‌ಗಳನ್ನು ಪಡೆದಿದ್ದಾರೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ