AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಸಂಗೀತ ನಿರ್ದೇಶಕ ಇಳಯರಾಜ್ ಸಂತಾಪ

ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಸಂಗೀತ ನಿರ್ದೇಶಕ ಇಳಯರಾಜ್ ಸಂತಾಪ

ಪ್ರಸನ್ನ ಹೆಗಡೆ
|

Updated on: Jul 12, 2026 | 12:21 PM

Share

ಮುಖ್ಯಾಂಶಗಳು

  • ಹಿರಿಯ ಗಾಯಕಿ, ಗಾನಕೋಗಿಲೆ ಎಸ್​.ಜಾನಕಿ(88) ವಿಧಿವಶ
  • ಎಸ್​.ಜಾನಕಿ ನಿಧನಕ್ಕೆ ಸಂಗೀತ ನಿರ್ದೇಶಕ ಇಳಯರಾಜ್ ಸಂತಾಪ
  • ಲಂಡನ್​​ನಿಂದ ವಿಡಿಯೋ ಮೂಲಕ ಸಂತಾಪ ಸೂಚಿಸಿದ ಇಳಯರಾಜ್

ಹಿರಿಯ ಗಾಯಕಿ ಎಸ್​. ಜಾನಕಿ ನಿಧನಕ್ಕೆ ಸಂಗೀತ ನಿರ್ದೇಶಕ ಇಳಯರಾಜ್ ಆಘಾತ ವ್ಯಕ್ತಪಡಿಸಿದ್ದಾರೆ. ವೈಯಕ್ತಿಕ ಜೀವನದ ದುಃಖಗಳನ್ನು ಸಹಿಸಿಕೊಂಡು, ತಮ್ಮ ಪ್ರತಿಭೆಯಿಂದ ಜಾನಕಿ ಅಮ್ಮ ಅವರು ಸಂಗೀತ ಲೋಕದಲ್ಲಿ ಅಪ್ರತಿಮ ಸಾಧನೆ ಮಾಡಿದ್ದರು. ಅವರ ಅಗಲಿಕೆ ಭಾರತೀಯ ಚಲನಚಿತ್ರ ಸಂಗೀತಕ್ಕೆ ದೊಡ್ಡ ನಷ್ಟ ಎಂದು ಇಳಯರಾಜ್ ಸ್ಮರಿಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದ್ದಾರೆ.

ಬೆಂಗಳೂರು, ಜುಲೈ 12: ಹಿರಿಯ ಗಾಯಕಿ ಎಸ್​. ಜಾನಕಿ ಅವರ ನಿಧನಕ್ಕೆ ಸಂಗೀತ ನಿರ್ದೇಶಕ ಇಳಯರಾಜ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಲಂಡನ್‌ನಿಂದ ವೀಡಿಯೊ ಮೂಲಕ ಇಳಯರಾಜ್, ಜಾನಕಿ ಅಮ್ಮ ಅವರ ನಿಧನದ ಸುದ್ದಿ ಕೇಳಿ ತಮಗೆ ಅತ್ಯಂತ ದುಃಖ ಮತ್ತು ಆಘಾತವಾಗಿದೆ ಎಂದು ಹೇಳಿದ್ದಾರೆ. ಜೀವನದಲ್ಲಿ ಅಸಹನೀಯ ದುಃಖಗಳನ್ನು, ಸಹಿಸಲಾಗದ ಘಟನೆಗಳನ್ನು ಸಹಿಸಿಕೊಂಡು ಅವರು ಬದುಕಿದರು ಎಂಬುದು ಅತ್ಯಂತ ವೇದನೆಯ ವಿಷಯ ಎಂದು ಇಳಯರಾಜ್ ಸ್ಮರಿಸಿದ್ದಾರೆ. ತಮ್ಮ ಪ್ರತಿಭೆಯಲ್ಲಿ ಯಾರಿಗೂ ಕಡಿಮೆ ಇಲ್ಲ ಎಂಬುದನ್ನು ಜಾನಕಿ ಅಮ್ಮ ತಮ್ಮ ಪ್ರತಿಯೊಂದು ಹಾಡಿನಲ್ಲೂ ನಿರೂಪಿಸುತ್ತಲೇ ಬಂದಿದ್ದಾರೆ. ಅವರು ಅತ್ಯಂತ ಕಠಿಣ ಪರಿಶ್ರಮಿ. ಜಾನಕಿ ಅವರ ಅಗಲಿಕೆ ಭಾರತೀಯ ಚಲನಚಿತ್ರ ಸಂಗೀತ ಲೋಕಕ್ಕೆ ಒಂದು ದೊಡ್ಡ ನಷ್ಟ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸೋದಾಗಿ ಅವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us