AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gadag: ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?

Gadag: ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Aug 22, 2026 | 1:52 PM

Share

ಗದಗ ಜಿಲ್ಲೆಯ ಹರ್ತಿ ಗ್ರಾಮದಲ್ಲಿ ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ. ಆಧಾರ್, ವೋಟರ್ ಐಡಿ ಪಶ್ಚಿಮ ಬಂಗಾಳದ್ದಾಗಿದ್ದರೂ, ಅವರ ಮೂಲ ಬಾಂಗ್ಲಾದೇಶದವರು ಎಂದು ಜನನ ಪ್ರಮಾಣಪತ್ರಗಳ ಮೂಲಕ ಖಚಿತಪಡಿಸಲಾಗಿದೆ. ಕಾನೂನು ಪ್ರಕ್ರಿಯೆಗಳ ಬಳಿಕ ಅವರನ್ನು ವಾಪಸ್ ಕಳುಹಿಸಲು ಸಿದ್ಧತೆ ನಡೆದಿದೆ.

ಗದಗ, ಆಗಸ್ಟ್ 22: ಪಶ್ಚಿಮ ಬಂಗಾಳದ ಚುನಾವಣೆಗಳ ನಂತರ ದೇಶದ ಹಲವು ರಾಜ್ಯಗಳಿಗೆ ಬಾಂಗ್ಲಾದೇಶದ ಪ್ರಜೆಗಳು ವಲಸೆ ಬಂದಿರುವ ಕುರಿತು ವರದಿಯಾಗಿದೆ. ಈ ಹಿಂದೆ ಕರ್ನಾಟಕದ ಬೇರೆ ಜಿಲ್ಲೆಗಳಲ್ಲೂ ಬಾಂಗ್ಲಾ ಪ್ರಜೆಗಳು ಪತ್ತೆಯಾಗಿ ಕಾನೂನು ಪ್ರಕ್ರಿಯೆಗಳ ನಂತರ ಅವರನ್ನು ದೇಶಕ್ಕೆ ವಾಪಸ್ ಕಳುಹಿಸಲಾಗಿತ್ತು. ಇದೀಗ ಗದಗ ಜಿಲ್ಲೆಯಲ್ಲಿ ಇಬ್ಬರು ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ.

ಗದಗ ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆ ಕಟ್ಟಡದಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ 26 ವರ್ಷದ ಸಾಕ್ರಿಬ್ ಮತ್ತು ಮಹಮದ್ ಎಂಬ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಸ್ಥಳೀಯ ಮಹಿಳೆಯೊಬ್ಬರು ನೀಡಿದ ಮಾಹಿತಿಯ ಮೇರೆಗೆ, ಗದಗ ಎಸ್‌ಪಿ ಹೋನ್ ಜಗದೀಶ್ ಅವರ ಮಾರ್ಗದರ್ಶನದಲ್ಲಿ ಸಿಪಿಐ ಸಿದ್ದೇಶ್ವರ ನೇತೃತ್ವದಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us