ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವುಗಳು ರಕ್ಷಣೆ, ಕೆಲವು ಹಸುಗಳು ಮೃತಪಟ್ಟಿರುವ ಶಂಕೆ

Edited By:

Updated on: Feb 03, 2026 | 5:33 PM

ಮುಳಬಾಗಿಲಿನ ಹನುಮನಹಳ್ಳಿ ಟೋಲ್ ಬಳಿ ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವುಗಳನ್ನು ಗೋರಕ್ಷಕರು ರಕ್ಷಿಸಿದ್ದಾರೆ. ಹೈದರಾಬಾದ್‌ನಿಂದ ಕಸಾಯಿಖಾನೆಗೆ ಸಾಗಿಸುತ್ತಿದ್ದ ಈ ಗೋವುಗಳು ಕಂಟೇನರ್‌ನಲ್ಲಿ ಗಾಳಿ, ನೀರಿಲ್ಲದೆ ದಯನೀಯ ಸ್ಥಿತಿಯಲ್ಲಿದ್ದವು. ಕೆಲವು ಹಸುಗಳು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಗೋರಕ್ಷಕ ದಳ ಮತ್ತು ಬಜರಂಗದಳದ ಕಾರ್ಯಕರ್ತರು ಈ ಕಾರ್ಯಾಚರಣೆ ನಡೆಸಿದ್ದಾರೆ.

ಕೋಲಾರ, ಫೆ.3: ಹೈದರಾಬಾದ್‌ನಿಂದ ಬೆಂಗಳೂರಿಗೆ ಅಕ್ರಮವಾಗಿ ಕಂಟೇನರ್‌ನಲ್ಲಿ ಸಾಗಿಸಲಾಗುತ್ತಿದ್ದ ಸುಮಾರು 70ಕ್ಕೂ ಹೆಚ್ಚು ಗೋವುಗಳನ್ನು ಮುಳಬಾಗಿಲು ತಾಲೂಕಿನ ಹನುಮನಹಳ್ಳಿ ಟೋಲ್ ಬಳಿ ಗೋರಕ್ಷಕರು ಪತ್ತೆ ಹಚ್ಚಿ ರಕ್ಷಿಸಿದ್ದಾರೆ. ಮುಳಬಾಗಿಲು ತಾಲೂಕಿನ ರಾಷ್ಟ್ರೀಯ ಹೆದ್ದಾರಿಯ ಹನುಮನಹಳ್ಳಿ ಟೋಲ್ ಬಳಿ ಇಂದು (ಫೆ.3) ಸಂಜೆ ಈ ಘಟನೆ ನಡೆದಿದೆ. ಹೈದರಾಬಾದ್‌ನಿಂದ ಬೆಂಗಳೂರಿನ ಕಸಾಯಿಖಾನೆಗೆ ಅತಿ ಕ್ರೂರವಾಗಿ ಕಂಟೇನರ್‌ನಲ್ಲಿ ಗೋವುಗಳನ್ನು ತುಂಬಿಕೊಂಡು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಗೋರಕ್ಷಕ ದಳ ಹಾಗೂ ಭಜರಂಗದಳದ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿದರು. ಮುಚ್ಚಿದ ಕಂಟೇನರ್‌ನಲ್ಲಿ ಗಾಳಿ, ಬೆಳಕು, ಆಹಾರ ಮತ್ತು ನೀರಿಲ್ಲದೆ ಸುಮಾರು 70ಕ್ಕೂ ಹೆಚ್ಚು ದೇಸೀ ತಳಿಯ ಹಸುಗಳನ್ನು ತುಂಬಲಾಗಿತ್ತು. ದೀರ್ಘ ಪ್ರಯಾಣದ ಆಯಾಸ ಮತ್ತು ಉಸಿರುಗಟ್ಟಿಸುವ ವಾತಾವರಣದಿಂದಾಗಿ ಕಂಟೇನರ್‌ನಲ್ಲೇ ಕೆಲವು ಹಸುಗಳು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಕಂಟೇನರ್ ತೆರೆದಾಗ ಗೋವುಗಳ ದಯನೀಯ ಸ್ಥಿತಿ ಕಂಡು ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More