AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಶಾಲಾ ಕಟ್ಟಡದಲ್ಲಿ ಭಾರೀ ಪ್ರಮಾಣದ ಪಟಾಕಿ ಅಕ್ರಮ ದಾಸ್ತಾನು, ಜಪ್ತಿ

ಶಿವಮೊಗ್ಗ: ಶಾಲಾ ಕಟ್ಟಡದಲ್ಲಿ ಭಾರೀ ಪ್ರಮಾಣದ ಪಟಾಕಿ ಅಕ್ರಮ ದಾಸ್ತಾನು, ಜಪ್ತಿ

ಬಸವರಾಜ್​ ಯರಗಣವಿ
| Edited By: |

Updated on: Nov 05, 2026 | 7:23 AM

Share

ಶಿವಮೊಗ್ಗದ ಜಯನಗರದ ಕಿಡ್ಸ್ ಶಾಲಾ ಕಟ್ಟಡದ ಮೇಲ್ಭಾಗದಲ್ಲಿ ಭಾರೀ ಪ್ರಮಾಣದ ಅಕ್ರಮ ಪಟಾಕಿ ದಾಸ್ತಾನು ಪತ್ತೆಯಾಗಿದೆ. ಎಸಿ ಮೈತ್ರಿ ನೇತೃತ್ವದಲ್ಲಿ ದಾಳಿ ನಡೆಸಿ ಪಟಾಕಿಗಳನ್ನು ಜಪ್ತಿ ಮಾಡಲಾಗಿದೆ. ಮಕ್ಕಳ ಸುರಕ್ಷತೆಗೆ ಅಪಾಯಕಾರಿಯಾಗಿದ್ದ ಈ ಘಟನೆ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಪಟಾಕಿಗಳನ್ನು ಸಂಗ್ರಹಿಸಲು ನಿಯಮಗಳನ್ನು ಪಾಲಿಸುವುದು ಕಡ್ಡಾಯ.

ಶಿವಮೊಗ್ಗ, ನವೆಂಬರ್ 5: ಶಿವಮೊಗ್ಗದ ಜಯನಗರದ ಎರಡನೇ ಕ್ರಾಸ್‌ನಲ್ಲಿರುವ ಕಿಡ್ಸ್ ಶಾಲಾ ಕಟ್ಟಡದ ಮೇಲ್ಭಾಗದಲ್ಲಿ ಭಾರೀ ಪ್ರಮಾಣದ ಅಕ್ರಮ ಪಟಾಕಿ ದಾಸ್ತಾನು ಪತ್ತೆಯಾಗಿದೆ. ಅಮರ್ ಎಂಬುವವರು ಅಕ್ರಮವಾಗಿ ಪಟಾಕಿಗಳನ್ನು ಸಂಗ್ರಹಿಸಿದ್ದರು. ಈ ಬಗ್ಗೆ ಮಾಹಿತಿ ದೊರೆಯುತ್ತಿದ್ದಂತೆ ಎಸಿ ಮೈತ್ರಿ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳು, ಅಪಾರ ಪ್ರಮಾಣದ ಪಟಾಕಿಗಳನ್ನು ಜಪ್ತಿ ಮಾಡಿದ್ದಾರೆ. ಪಟಾಕಿ ದಾಸ್ತಾನಿಗೆ ಕಟ್ಟುನಿಟ್ಟಾದ ನಿಯಮಗಳು ಮತ್ತು ಮುನ್ನೆಚ್ಚರಿಕೆ ಕ್ರಮಗಳು ಅಗತ್ಯ. ಆದರೆ, ಮಕ್ಕಳು ಓದುವ ಖಾಸಗಿ ಶಾಲೆಯ ಕಟ್ಟಡದ ಮೇಲ್ಭಾಗದಲ್ಲೇ ಈ ರೀತಿ ಅಕ್ರಮವಾಗಿ ಪಟಾಕಿಗಳನ್ನು ಸಂಗ್ರಹಿಸಿರುವುದು ಭಾರಿ ಅನಾಹುತಕ್ಕೆ ಆಹ್ವಾನ ನೀಡಿದಂತಾಗಿದೆ. ಯಾವುದೇ ಅವಘಡ ಸಂಭವಿಸುವುದಕ್ಕೂ ಮುನ್ನವೇ ದಾಳಿ ನಡೆಸಿ ಪಟಾಕಿಗಳನ್ನು ವಶಪಡಿಸಿಕೊಳ್ಳಲಾಗಿರುವುದು ಸ್ಥಳೀಯರ ನಿಟ್ಟುಸಿರಿಗೆ ಕಾರಣವಾಗಿದೆ.

ಪಟಾಕಿ ಸಂಗ್ರಹಿಸಿದ್ದ ವ್ಯಕ್ತಿ, ಗೋದಾಮು ಖಾಲಿ ಇಲ್ಲದ ಕಾರಣ ತಾತ್ಕಾಲಿಕವಾಗಿ ಶಾಲಾ ಕಟ್ಟಡದಲ್ಲಿ ಸಂಗ್ರಹಿಸಿರುವುದಾಗಿ ತಿಳಿಸಿದ್ದಾರೆ. ಬೆಳಗ್ಗೆ ತಂದಿದ್ದ ಪಟಾಕಿಗಳನ್ನು ಸಂಜೆಯೊಳಗೆ ಬೇರೆಡೆಗೆ ಸಾಗಿಸಲು ಯೋಜಿಸಲಾಗಿತ್ತು. ಅಷ್ಟರಲ್ಲಿ ಹೀಗಾಗಿದೆ. ತಪ್ಪಾಗಿರುವುದು ನಿಜ. ಕಾನೂನು ರೀತಿ ಏನು ಕ್ರಮ ಕೈಗೊಳ್ಳುತ್ತಾರೋ ಅದಕ್ಕೆ ಸಹಕಾರ ನೀಡುತ್ತೇವೆ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಸವರಾಜ್​ ಯರಗಣವಿ
ಬಸವರಾಜ್​ ಯರಗಣವಿ

ಬಸವರಾಜ್ ಯರಗಣವಿಯವರು ಮೂಲತಃ ಧಾರವಾಡ ಜಿಲ್ಲೆಯವರು. ಇವರು ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ವರದಿಗಾರರಾಗಿ 2008ರ ಏಪ್ರಿಲ್ ನಿಂದ ವೃತ್ತಿ ಆರಂಭಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 3 ವರ್ಷ, ನಂತರ ಹಾವೇರಿ ಜಿಲ್ಲೆಯಲ್ಲಿ 3 ವರ್ಷ ವರದಿಗಾರಿಕೆಯ ಕೆಲಸ ನಿರ್ವಹಿಸಿದ್ದಾರೆ. ಸಧ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಟಿವಿ9 ಕನ್ನಡ ಸುದ್ದಿ ವಾಹಿನಿಯ ಹಿರಿಯ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜಿಲ್ಲೆಯ ರಾಜಕೀಯ, ಅಪರಾಧ, ಮಹತ್ವದ ಬೆಳವಣಿಗೆ ಹಾಗೂ ಮಾನವೀಯ ಸುದ್ದಿಗಳನ್ನು ವರದಿ ಮಾಡಿರುವ ಅನುಭವವಿದೆ.

Read More