ಅಕ್ರಮ ರೆಸಾರ್ಟ್‌, ಹೋಂ ಸ್ಟೇಗಳ ಮಾಲೀಕರಿಗೆ ಭರ್ಜರಿ ಶಾಕ್​​ ಕೊಟ್ಟ ಕೊಪ್ಪಳ ಜಿಲ್ಲಾಡಳಿತ

Edited By:

Updated on: Feb 28, 2026 | 11:39 AM

ಟಿವಿ9 ವರದಿಯ ಪ್ರಭಾವದಿಂದ ಕೊಪ್ಪಳ ಜಿಲ್ಲಾಡಳಿತವು ಅಕ್ರಮ ರೆಸಾರ್ಟ್‌ಗಳ ವಿರುದ್ಧ ಕ್ರಮ ಕೈಗೊಂಡಿದೆ. ಕೊಪ್ಪಳ ತಾಲೂಕಿನಲ್ಲಿ 49 ಮತ್ತು ಗಂಗಾವತಿಯಲ್ಲಿ 87 ಅನಧಿಕೃತ ರೆಸಾರ್ಟ್‌ ಹಾಗೂ ಹೋಮ್ ಸ್ಟೇಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿದ್ದ 5 ರೆಸಾರ್ಟ್‌ಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ.

ಕೊಪ್ಪಳ, ಫೆಬ್ರವರಿ 28: ಅಕ್ರಮ ರೆಸಾರ್ಟ್‌ಗಳ ಬಗ್ಗೆ ಟಿವಿ9 ವರದಿ ಬೆನ್ನಲ್ಲೇ ಇವುಗಳ ವಿರುದ್ಧ ಕೊಪ್ಪಳ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಂಡಿದೆ. ಕಾರ್ಯಾಚರಣೆ ನಡೆಸಿ ಹಲವು ಅನಧಿಕೃತ ರೆಸಾರ್ಟ್‌ಗಳನ್ನು ಸೀಜ್ ಮಾಡಲಾಗಿದ್ದು, ಕೊಪ್ಪಳ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ 49 ಮತ್ತು ಗಂಗಾವತಿ ಪ್ರದೇಶದಲ್ಲಿ 87 ಅನಧಿಕೃತ ರೆಸಾರ್ಟ್‌ಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ಇದರ ಜೊತೆಗೆ, ಜಿಲ್ಲೆಯ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ 5 ರೆಸಾರ್ಟ್‌ಗಳನ್ನು ಜಿಲ್ಲಾಡಳಿತ ಸಂಪೂರ್ಣವಾಗಿ ತೆರವುಗೊಳಿಸಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Feb 28, 2026 11:39 AM
Follow Us
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More