ILT20: ಸೋತರೂ ಪ್ಲೇಆಫ್ಗೇರಿದ ಡೆಸರ್ಟ್ ವೈಪರ್ಸ್
Desert Vipers vs MI Emirates: ಈ ಮ್ಯಾಚ್ನಲ್ಲಿ ಟಾಸ್ ಗೆದ್ದ ಎಂಐ ಎಮಿರೇಟ್ಸ್ ತಂಡದ ನಾಯಕ ಕೀರನ್ ಪೊಲಾರ್ಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಡೆಸರ್ಟ್ ವೈಪರ್ಸ್ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 124 ರನ್ಗಳಿಸಲಷ್ಟೇ ಶಕ್ತರಾಗಿದ್ದರು. ಈ ಗುರಿಯನ್ನು ಬೆನ್ನತ್ತಿದ ಎಂಐ ಎಮಿರೇಟ್ಸ್ ತಂಡವು 17.3 ಓವರ್ಗಳಲ್ಲಿ 128 ರನ್ ಬಾರಿಸಿ 4 ವಿಕೆಟ್ಗಳ ಜಯ ಸಾಧಿಸಿದೆ.
ಯುಎಇನಲ್ಲಿ ನಡೆಯುತ್ತಿರುವ ಇಂಟರ್ನ್ಯಾಷನಲ್ ಲೀಗ್ ಟಿ20 ಟೂರ್ನಿಯಲ್ಲಿ ಡೆಸರ್ಟ್ ವೈಪರ್ಸ್ ತಂಡ ಪ್ಲೇಆಫ್ಗೇರಿದೆ. ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಟೂರ್ನಿಯ 24ನೇ ಪಂದ್ಯದಲ್ಲಿ ಎಂಐ ಎಮಿರೇಟ್ಸ್ ಹಾಗೂ ಡೆಸರ್ಟ್ ವೈಪರ್ಸ್ ತಂಡಗಳು ಮುಖಾಮುಖಿಯಾಗಿದ್ದವು.
ಈ ಮ್ಯಾಚ್ನಲ್ಲಿ ಟಾಸ್ ಗೆದ್ದ ಎಂಐ ಎಮಿರೇಟ್ಸ್ ತಂಡದ ನಾಯಕ ಕೀರನ್ ಪೊಲಾರ್ಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಡೆಸರ್ಟ್ ವೈಪರ್ಸ್ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 124 ರನ್ಗಳಿಸಲಷ್ಟೇ ಶಕ್ತರಾಗಿದ್ದರು. ಈ ಗುರಿಯನ್ನು ಬೆನ್ನತ್ತಿದ ಎಂಐ ಎಮಿರೇಟ್ಸ್ ತಂಡವು 17.3 ಓವರ್ಗಳಲ್ಲಿ 128 ರನ್ ಬಾರಿಸಿ 4 ವಿಕೆಟ್ಗಳ ಜಯ ಸಾಧಿಸಿದೆ.
ಈ ಸೋಲಿನ ಹೊರತಾಗಿಯೂ ಆಡಿದ 9 ಪಂದ್ಯಗಳಲ್ಲಿ 7 ಜಯ ಸಾಧಿಸಿರುವ ಡೆಸರ್ಟ್ ವೈಪರ್ಸ್ ತಂಡವು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸುವ ಮೂಲಕ ಪ್ಲೇಆಫ್ ಹಂತಕ್ಕೆ ಅರ್ಹತೆ ಪಡೆದುಕೊಂಡಿದೆ. ಇತ್ತ ಡೆಸರ್ಟ್ ವೈಪರ್ಸ್ ಪ್ಲೇಆಫ್ನಲ್ಲಿ ತನ್ನ ಸ್ಥಾನ ಖಚಿತಪಡಿಸಿಕೊಂಡರೆ, ಅತ್ತ ಶಾರ್ಜಾ ವಾರಿಯರ್ಸ್ ಟೂರ್ನಿಯಿಂದ ಹೊರಬೀಳುವುದು ಖಚಿತವಾಗಿದೆ.
ಡೆಸರ್ಟ್ ವೈಪರ್ಸ್ ಪ್ಲೇಯಿಂಗ್ 11: ಫಖರ್ ಝಮಾನ್ , ಮ್ಯಾಕ್ಸ್ ಹೋಲ್ಡನ್ , ಹಸನ್ ನವಾಝ್ , ಜೇಸನ್ ರಾಯ್ , ಸ್ಯಾಮ್ ಕರನ್ , ಟಾಮ್ ಬ್ರೂಸ್ (ವಿಕೆಟ್ ಕೀಪರ್) ಡಾನ್ ಲಾರೆನ್ಸ್ , ಸಂಜಯ್ ಪಹಲ್ , ಮತಿಯುಲ್ಲಾ ಖಾನ್ , ಲಾಕಿ ಫರ್ಗುಸನ್ (ನಾಯಕ) , ಕೈಸ್ ಅಹ್ಮದ್ , ಡೇವಿಡ್ ಪೇನ್.
ಎಂಐ ಎಮಿರೇಟ್ಸ್ ಪ್ಲೇಯಿಂಗ್ 11: ಮುಹಮ್ಮದ್ ವಸೀಮ್ , ಟಾಮ್ ಬ್ಯಾಂಟನ್ , ಸಂಜಯ್ ಕೃಷ್ಣಮೂರ್ತಿ , ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಕೀರನ್ ಪೊಲಾರ್ಡ್ (ನಾಯಕ) , ರೊಮಾರಿಯೋ ಶೆಫರ್ಡ್ , ಶಕೀಬ್ ಅಲ್ ಹಸನ್ , ಕ್ರಿಸ್ ವೋಕ್ಸ್ ,
ಅರಬ್ ಗುಲ್ , ಅಲ್ಲಾಹ್ ಗಜನ್‌ಫರ್ , ಝಹೂರ್ ಖಾನ್ , ಜಾನಿ ಬೈರ್‌ಸ್ಟೋವ್.
Published on: Dec 22, 2025 09:31 AM
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು

