ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್

Updated on: Dec 22, 2025 | 9:44 AM

Desert Vipers vs MI Emirates: ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಎಂಐ ಎಮಿರೇಟ್ಸ್ ತಂಡದ ನಾಯಕ ಕೀರನ್ ಪೊಲಾರ್ಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಡೆಸರ್ಟ್ ವೈಪರ್ಸ್ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 124 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಈ ಗುರಿಯನ್ನು ಬೆನ್ನತ್ತಿದ ಎಂಐ ಎಮಿರೇಟ್ಸ್ ತಂಡವು 17.3 ಓವರ್​ಗಳಲ್ಲಿ 128 ರನ್ ಬಾರಿಸಿ 4 ವಿಕೆಟ್​ಗಳ ಜಯ ಸಾಧಿಸಿದೆ.

ಯುಎಇನಲ್ಲಿ ನಡೆಯುತ್ತಿರುವ ಇಂಟರ್​ನ್ಯಾಷನಲ್ ಲೀಗ್ ಟಿ20 ಟೂರ್ನಿಯಲ್ಲಿ ಡೆಸರ್ಟ್ ವೈಪರ್ಸ್ ತಂಡ ಪ್ಲೇಆಫ್​ಗೇರಿದೆ. ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಟೂರ್ನಿಯ 24ನೇ ಪಂದ್ಯದಲ್ಲಿ ಎಂಐ ಎಮಿರೇಟ್ಸ್ ಹಾಗೂ ಡೆಸರ್ಟ್ ವೈಪರ್ಸ್ ತಂಡಗಳು ಮುಖಾಮುಖಿಯಾಗಿದ್ದವು.

ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಎಂಐ ಎಮಿರೇಟ್ಸ್ ತಂಡದ ನಾಯಕ ಕೀರನ್ ಪೊಲಾರ್ಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಡೆಸರ್ಟ್ ವೈಪರ್ಸ್ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 124 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಈ ಗುರಿಯನ್ನು ಬೆನ್ನತ್ತಿದ ಎಂಐ ಎಮಿರೇಟ್ಸ್ ತಂಡವು 17.3 ಓವರ್​ಗಳಲ್ಲಿ 128 ರನ್ ಬಾರಿಸಿ 4 ವಿಕೆಟ್​ಗಳ ಜಯ ಸಾಧಿಸಿದೆ.

ಈ ಸೋಲಿನ ಹೊರತಾಗಿಯೂ ಆಡಿದ 9 ಪಂದ್ಯಗಳಲ್ಲಿ 7 ಜಯ ಸಾಧಿಸಿರುವ ಡೆಸರ್ಟ್ ವೈಪರ್ಸ್ ತಂಡವು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸುವ ಮೂಲಕ ಪ್ಲೇಆಫ್ ಹಂತಕ್ಕೆ ಅರ್ಹತೆ ಪಡೆದುಕೊಂಡಿದೆ. ಇತ್ತ ಡೆಸರ್ಟ್ ವೈಪರ್ಸ್ ಪ್ಲೇಆಫ್​ನಲ್ಲಿ ತನ್ನ ಸ್ಥಾನ ಖಚಿತಪಡಿಸಿಕೊಂಡರೆ, ಅತ್ತ ಶಾರ್ಜಾ ವಾರಿಯರ್ಸ್ ಟೂರ್ನಿಯಿಂದ ಹೊರಬೀಳುವುದು ಖಚಿತವಾಗಿದೆ.

ಡೆಸರ್ಟ್ ವೈಪರ್ಸ್ ಪ್ಲೇಯಿಂಗ್ 11:  ಫಖರ್ ಝಮಾನ್ , ಮ್ಯಾಕ್ಸ್ ಹೋಲ್ಡನ್ , ಹಸನ್ ನವಾಝ್ , ಜೇಸನ್ ರಾಯ್ , ಸ್ಯಾಮ್ ಕರನ್ , ಟಾಮ್ ಬ್ರೂಸ್ (ವಿಕೆಟ್ ಕೀಪರ್) ಡಾನ್ ಲಾರೆನ್ಸ್ , ಸಂಜಯ್ ಪಹಲ್ , ಮತಿಯುಲ್ಲಾ ಖಾನ್ , ಲಾಕಿ ಫರ್ಗುಸನ್ (ನಾಯಕ) , ಕೈಸ್ ಅಹ್ಮದ್ , ಡೇವಿಡ್ ಪೇನ್.

ಎಂಐ ಎಮಿರೇಟ್ಸ್ ಪ್ಲೇಯಿಂಗ್ 11: ಮುಹಮ್ಮದ್ ವಸೀಮ್ , ಟಾಮ್ ಬ್ಯಾಂಟನ್ , ಸಂಜಯ್ ಕೃಷ್ಣಮೂರ್ತಿ , ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಕೀರನ್ ಪೊಲಾರ್ಡ್ (ನಾಯಕ) , ರೊಮಾರಿಯೋ ಶೆಫರ್ಡ್ , ಶಕೀಬ್ ಅಲ್ ಹಸನ್ , ಕ್ರಿಸ್ ವೋಕ್ಸ್ ,
ಅರಬ್ ಗುಲ್ , ಅಲ್ಲಾಹ್ ಗಜನ್‌ಫರ್ , ಝಹೂರ್ ಖಾನ್ , ಜಾನಿ ಬೈರ್‌ಸ್ಟೋವ್.

Published on: Dec 22, 2025 09:31 AM