ಅಬ್ಬರ ಸಿಡಿಲಬ್ಬರ… ಒಂದೇ ಓವರ್ನಲ್ಲಿ 30 ರನ್ ಚಚ್ಚಿದ ಕೀರನ್ ಪೊಲಾರ್ಡ್
MI Emirates vs Dubai Capitals: ವಕಾರ್ ಸಲಾಂಖೈಲ್ ಎಸೆದ 15ನೇ ಓವರ್ನಲ್ಲಿ ಅಬ್ಬರಿಸಿದ ಪೊಲಾರ್ಡ್ 6, 4, 2, 6, 6, 6, ಸಿಡಿಸುವ ಮೂಲಕ ಬರೋಬ್ಬರಿ 30 ರನ್ ಚಚ್ಚಿದರು. ಈ ಮೂಲಕ 16.4 ಓವರ್ಗಳಲ್ಲಿ ಎಮಿರೇಟ್ಸ್ ತಂಡವನ್ನು ಗುರಿ ಮುಟ್ಟಿಸಿ 8 ವಿಕೆಟ್ಗಳ ಭರ್ಜರಿ ಜಯ ತಂದುಕೊಟ್ಟರು.
ಇಂಟರ್ನ್ಯಾಷನಲ್ ಲೀಗ್ ಟಿ20 ಟೂರ್ನಿಯಲ್ಲಿ ಕೀರನ್ ಪೊಲಾರ್ಡ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಅದು ಸಹ ಒಂದೇ ಓವರ್ನಲ್ಲಿ 30 ರನ್ ಚಚ್ಚುವ ಮೂಲಕ. ಅಬುಧಾಬಿಯ ಶೇಖ್ ಝಾಯೆದ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಎಂಐ ಎಮಿರೇಟ್ಸ್ ಹಾಗೂ ದುಬೈ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು.
ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ದುಬೈ ಕ್ಯಾಪಿಟಲ್ಸ್ ತಂಡವು 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಕೇವಲ 122 ರನ್ಗಳು ಮಾತ್ರ.
ಅದರಂತೆ 123 ರನ್ಗಳ ಸುಲಭ ಗುರಿ ಬೆನ್ನತ್ತಿದ ಎಂಐ ಎಮಿರೇಟ್ಸ್ ತಂಡವು 59 ರನ್ಗಳಿಗೆ 2 ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಕಣಕ್ಕಿಳಿದ ನಾಯಕ ಕೀರನ್ ಪೊಲಾರ್ಡ್ ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ್ದರು.
ಆದರೆ ವಕಾರ್ ಸಲಾಂಖೈಲ್ ಎಸೆದ 15ನೇ ಓವರ್ನಲ್ಲಿ ಅಬ್ಬರಿಸಿದ ಪೊಲಾರ್ಡ್ 6, 4, 2, 6, 6, 6, ಸಿಡಿಸುವ ಮೂಲಕ ಬರೋಬ್ಬರಿ 30 ರನ್ ಚಚ್ಚಿದರು. ಈ ಮೂಲಕ 16.4 ಓವರ್ಗಳಲ್ಲಿ ಎಮಿರೇಟ್ಸ್ ತಂಡವನ್ನು ಗುರಿ ಮುಟ್ಟಿಸಿ 8 ವಿಕೆಟ್ಗಳ ಭರ್ಜರಿ ಜಯ ತಂದುಕೊಟ್ಟರು.
ಈ ಗೆಲುವಿನೊಂದಿಗೆ ಎಂಐ ಎಮಿರೇಟ್ಸ್ ತಂಡವು ಇಂಟರ್ನ್ಯಾಷನಲ್ ಟಿ20 ಲೀಗ್ನ ಪ್ಲೇಆಫ್ಗೆ ಅರ್ಹತೆ ಪಡೆದುಕೊಂಡಿದೆ. ಅದರಂತೆ ಜನವರಿ ಮೊದಲ ವಾರದಲ್ಲಿ ನಡೆಯಲಿರುವ ಪ್ಲೇಆಫ್ ಪಂದ್ಯಗಳಲ್ಲಿ ಎಂಐ ಎಮಿರೇಟ್ಸ್ ತಂಡ ಕೂಡ ಕಣಕ್ಕಿಳಿಯಲಿದೆ.
