AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಮಾತ್ರ ಗೊತ್ತು: ಮಾಜಿ ಸಿಎಂ ಮಾರ್ಮಿಕ ನುಡಿ

ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಮಾತ್ರ ಗೊತ್ತು: ಮಾಜಿ ಸಿಎಂ ಮಾರ್ಮಿಕ ನುಡಿ

ಪ್ರಸನ್ನ ಗಾಂವ್ಕರ್​
| Edited By: |

Updated on: Sep 17, 2026 | 6:13 PM

Share

ನಾನೀಗ ಮುಖ್ಯಮಂತ್ರಿ ಅಲ್ಲ, ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಮಾತ್ರ ಗೊತ್ತು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬೇಸರ ಹೊರಹಾಕಿದ್ದಾರೆ. ನಿನ್ನೆಯಷ್ಟೇ ಬೆಂಗಳೂರಿನಲ್ಲಿ ಎಐಸಿಸಿ ನಾಯಕರಾದ ಕೆಸಿ ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೆವಾಲ ಜೊತೆ ಸಿದ್ದರಾಮಯ್ಯ ಪ್ರತ್ಯೇಕ ಮಾತುಕತೆ ನಡೆಸಿದ್ದರು. ಇದರ ಬೆನ್ನಲ್ಲೇ ಸಿದ್ದರಾಮಯ್ಯನವರ ಈ ರೀತಿಯ ಮಾರ್ಮಿಕ ಮಾತುಗಳನ್ನಾಡಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.

ಬೆಂಗಳೂರು, (ಸೆಪ್ಟೆಂಬರ್ 17) : ನಾನೀಗ ಮುಖ್ಯಮಂತ್ರಿ ಅಲ್ಲ, ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಮಾತ್ರ ಗೊತ್ತು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮಾರ್ಮಿಕವಾಗಿ ಮಾತನಾಡಿದ್ದಾರೆ. ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ನಾನೀಗ ಮುಖ್ಯಮಂತ್ರಿ ಅಲ್ಲ. ನನ್ನ ಮಾತು ಈಗಲೂ ನಡೆಯುತ್ತೆ ಅಂತ ಬಹಳ ಜನ ಅಂದುಕೊಂಡಿದ್ದಾರೆ. ನಾನೂ ಹಾಗೇ ಅಂದುಕೊಂಡಿದ್ದೆ. ಆದ್ರೆ ನನ್ನ ಮಾತು ಎಷ್ಟು ನಡೆಯುತ್ತೆ, ಎಷ್ಟು ನಡೆಯಲ್ಲ ಅಂತ ನನಗೆ ಮಾತ್ರ ಗೊತ್ತು ಎಂದು ಹೇಳಿದ್ದಾರೆ.

ಸಿಎಂ ಆಗಿದ್ದಾಗ ಎಷ್ಟೇ ಟೀಕೆ ಮಾಡಿದ್ರೂ ಯಾರಿಗೂ ಕರೆ ಮಾಡಿಲ್ಲ. ಆದ್ರೆ ಸುಳ್ಳು ಆರೋಪ ಮಾಡಿದ್ರೆ ಮನಸ್ಸಿಗೆ ಬಹಳ ನೋವಾಗುತ್ತದೆ. ರಾಜ್ಯದಲ್ಲಿ ಮೌಢ್ಯ ಪ್ರತಿಬಂಧಕ ಕಾಯ್ದೆ ಜಾರಿಗೆ ತಂದಿದ್ದೇವೆ. ಇಂತಹ ಕಾಯ್ದೆ ಇದೆ ಎಂದು ಜನರಿಗೆ ಗೊತ್ತಿಲ್ಲವೆಂದು ಬೇಸರ ಹೊರಹಾಕಿದ ಸಿದ್ದರಾಮಯ್ಯ, ನಾನು ಸಿಎಂ ಆಗಿದ್ದಾಗ ನನ್ನ ಕಾರಿನ ಮೇಲೆ ಒಂದು ಕಾಗೆ ಕೂತಿತ್ತು. ಮುಂದಿನ ಬಜೆಟ್ ಮಂಡಿಸಲ್ಲವೆಂದು ಒಬ್ಬ ಪುರೋಹಿತ ಹೇಳಿದ್ರು. ಮತ್ತೊಬ್ಬರು ಬಜೆಟ್ ಮಂಡಿಸ್ತಾರೆ, ಆದ್ರೆ ಸಿಎಂ ಆಗಿರಲ್ಲ ಅಂದ್ರು. ಮಾಧ್ಯಮಗಳಲ್ಲಿ ಇಂತಹ ಸುದ್ದಿ ನೋಡಿ ಜನ ಚಪ್ಪಾಳೆ ತಟ್ಟುತ್ತಾರೆ. ಎಲ್ಲರೂ ಹುಷಾರಾಗಿ ಹೆಜ್ಜೆ ಇಡಿ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More