ಬೆಂಗಳೂರಿಗೆ ನಾನೇ ಲಾಸ್ಟ್ ಅನ್ ಡಿವೈಡೆಡ್ ಪೊಲೀಸ್ ಕಮಿಷನರ್: ನಿರ್ಗಮಿತ ಆಯುಕ್ತರ ಮನದಾಳದ ಮಾತು
ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರನ್ನು ಅಗ್ನಿಶಾಮಕ ದಳ ಎಡಿಜಿಪಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಇಂದು(ನವೆಂಬರ್ 18) ಆದೇಶ ಹೊರಡಿಸಿದೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸೀಮಂತ್ ಕುಮಾರ್, ಎಲ್ಲಾ ಸಿಬ್ಬಂದಿಗೆ ಧನ್ಯವಾದಗಳು. ಅಲ್ಲದೇ ಬೆಂಗಳೂರಿಗೆ ನಾನೇ ಲಾಸ್ಟ್ ಅನ್ ಡಿವೈಡೆಡ್ ಪೊಲೀಸ್ ಕಮಿಷನರ್ ಎಂದು ಹೆಮ್ಮೆ ವ್ಯಕ್ತಪಡಿಸಿದರು.
ಬೆಂಗಳೂರು, (ನವೆಂಬರ್ 18): ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರನ್ನು ಅಗ್ನಿಶಾಮಕ ದಳ ಎಡಿಜಿಪಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಇಂದು(ನವೆಂಬರ್ 18) ಆದೇಶ ಹೊರಡಿಸಿದೆ. ಇನ್ನು ಹೊಸ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಆರ್ ಹಿತೇಂದ್ರ ಅವರನ್ನು ನೇಮಕ ಮಾಡಲಾಗಿದ್ದು, ಸೀಮಂತ್ ಕುಮಾರ್ ಅವರು ಹಿತೇಂದ್ರ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸೀಮಂತ್ ಕುಮಾರ್,ಒಂದೂವರೆ ವರ್ಷ ಪೊಲೀಸ್ ಆಯುಕ್ತರಾಗಿ ಕೆಲಸ ಮಾಡಿದ್ದೇನೆ. ಪ್ರತಿದಿನವೂ ಚಾಲೆಂಜ್ ಇರುತ್ತಿತ್ತು.ಕಮಿಷನರ್ ಆಗಿದ್ದಾಗ ಡ್ರಗ್ಸ್ ಮುಕ್ತ ನಗರ ಮಾಡಲು ಪ್ರಯತ್ನಿಸಿದ್ದೆ. ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಾಗಲೂ ಚಾಲೆಂಜ್ ಆಗಿತ್ತು. ಎಲ್ಲಾ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಸಹಕಾರ ನೀಡಿದ್ದಾರೆ. ಎಲ್ಲಾ ಸಿಬ್ಬಂದಿಗೆ ಧನ್ಯವಾದಗಳು. ಅಲ್ಲದೇ ಬೆಂಗಳೂರಿಗೆ ನಾನೇ ಲಾಸ್ಟ್ ಅನ್ ಡಿವೈಡೆಡ್ ಪೊಲೀಸ್ ಕಮಿಷನರ್ ಎಂದು ಹೆಮ್ಮೆ ವ್ಯಕ್ತಪಡಿಸಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
