Karnataka Assembly Polls 2023: ಲಕ್ಷ್ಮಣ್ ಸವದಿ ಬೆಂಗಳೂರಲ್ಲಿ ಸಿದ್ದರಾಮಯ್ಯ, ಶಿವಕುಮಾರ್ ಮತ್ತು ಸುರ್ಜೆವಾಲಾರನ್ನು ಭೇಟಿಯಾದ ದೃಶ್ಯಗಳು ಲಭ್ಯ

Karnataka Assembly Polls 2023: ಲಕ್ಷ್ಮಣ್ ಸವದಿ ಬೆಂಗಳೂರಲ್ಲಿ ಸಿದ್ದರಾಮಯ್ಯ, ಶಿವಕುಮಾರ್ ಮತ್ತು ಸುರ್ಜೆವಾಲಾರನ್ನು ಭೇಟಿಯಾದ ದೃಶ್ಯಗಳು ಲಭ್ಯ

ಅರುಣ್​ ಕುಮಾರ್​ ಬೆಳ್ಳಿ
|

Updated on: Apr 14, 2023 | 4:29 PM

ಇಂದು ಮಧ್ಯಾಹ್ನ ಸವದಿಯವರು ಸಿದ್ದರಾಮಯ್ಯ, ಶಿವಕುಮಾರ್, ಎಐಸಿಸಿ ಕರ್ನಾಟಕ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ ಅವರೊಂದಿಗೆ ಮಾತುಕತೆ ನಡೆಸಿದರು.

ಬೆಂಗಳೂರು: ಮಾಜಿ ಸಚಿವ ಲಕ್ಷ್ಮಣ ಸವದಿ (Laxman Savadi) ಇಂದು ವಿಧಾನ ಪರಿಷತ್ ಸದಸ್ಯನ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿಕ ಕಾಂಗ್ರೆಸ್ ಪಕ್ಷ ಸೇರುತ್ತಿರುವ ನಿರ್ಧಾರ ಪ್ರಕಟಿಸಿದ್ದಾರೆ. ಅವರು ಕಾಂಗ್ರೆಸ್ ಸೇರುವ ವಿಚಾರ ಬೆಳಗ್ಗೆಯೇ ಧೃಡಪಟ್ಟಿತ್ತು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಬೆಳಗಾವಿಗೆ ವಿಶೇಷ ವಿಮಾನವೊಂದನ್ನು ಕಳಿಸಿ ಸವದಿಯನ್ನು ಬೆಂಗಳೂರಿಗೆ ಕರೆಸಿಕೊಂಡಿದ್ದರು. ಇಂದು ಮಧ್ಯಾಹ್ನ ಸವದಿಯವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಶಿವಕುಮಾರ್, ಎಐಸಿಸಿ ಕರ್ನಾಟಕ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ (Randeep Singh Surjewala)  ಅವರೊಂದಿಗೆ ಮಾತುಕತೆ ನಡೆಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ