ಟಿವಿ9 ವರದಿ ಇಂಪ್ಯಾಕ್ಟ್​: ಅರಣ್ಯ ಇಲಾಖೆಯಿಂದ 51 ಕಾವಾಡಿ ಹುದ್ದೆಗೆ ನೇಮಕಾತಿ ಸ್ಥಗಿತ

Edited By:

Updated on: Nov 12, 2026 | 2:38 PM

ಮುಖ್ಯಾಂಶಗಳು

  • ಅರಣ್ಯ ಇಲಾಖೆಯಿಂದ 51 ಕಾವಾಡಿಗ ಹುದ್ದೆಗೆ ನೇಮಕಾತಿ ಸ್ಥಗಿತ
  • ನೇಮಕಾತಿ ಪ್ರಕ್ರಿಯೆಯಲ್ಲಿ ಲೋಪ ಆರೋಪ ಹಿನ್ನೆಲೆ ಸರ್ಕಾರ ಕ್ರಮ
  • ಕಾವಾಡಿಗರ ನೇಮಕಾತಿ ಅಕ್ರಮ ಬಗ್ಗೆ ವರದಿ ಪ್ರಸಾರ ಮಾಡಿದ್ದ ಟಿವಿ9

ಕರ್ನಾಟಕದಲ್ಲಿ 51 ಕಾವಾಡಿಗ ಹುದ್ದೆಗಳ ನೇಮಕಾತಿಯನ್ನು ಸ್ಥಗಿತಗೊಳಿಸಲಾಗಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ಲೋಪವಾಗಿರುವ ಆರೋಪದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಪ್ರಾಥಮಿಕ ತನಿಖೆ ನಡೆಸಿದ್ದು, ಅಕ್ರಮ ಪತ್ತೆಯಾಗಿದೆ. ಈ ಕುರಿತು ರಾಜ್ಯ ಸರ್ಕಾರವು ಇಲಾಖಾ ತನಿಖೆಗೆ ಆದೇಶಿಸಿದೆ. ಕಾವಾಡಿಗರ ನೇಮಕಾತಿ ಅಕ್ರಮ ಬಗ್ಗೆ ಟಿವಿ9 ವರದಿ ಪ್ರಸಾರ ಮಾಡಿತ್ತು.

ಮೈಸೂರು, ನವೆಂಬರ್​ 12: ಕರ್ನಾಟಕ ಸರ್ಕಾರವು 51 ಕಾವಾಡಿಗ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ ಆದೇಶ ಹೊರಡಿಸಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪಗಳ ಕುರಿತು ಟಿವಿ9 ವರದಿ ಪ್ರಸಾರ ಮಾಡಿತ್ತು. ಇದರ ಬೆನ್ನಲ್ಲೇ, ಅರಣ್ಯ ಇಲಾಖೆಯು ಪ್ರಾಥಮಿಕ ತನಿಖೆ ನಡೆಸಿ, ನೇಮಕಾತಿಯಲ್ಲಿ ಲೋಪಗಳು ಕಂಡುಬಂದಿರುವುದನ್ನು ಪತ್ತೆ ಹಚ್ಚಿದೆ. ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರ ಬರೆದಿದ್ದು, ಮೈಸೂರು ವೃತ್ತದ 26 ಹುದ್ದೆಗಳು ಸೇರಿದಂತೆ ಒಟ್ಟು 51 ಕಾವಾಡಿಗ ಹುದ್ದೆಗಳ ನೇಮಕಾತಿಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ. ರಾಜ್ಯ ಸರ್ಕಾರ ಈ ಪ್ರಕರಣದ ಕುರಿತು ಇಲಾಖಾ ತನಿಖೆಗೂ ಆದೇಶಿಸಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More