ದೇಶದ ಜನರಿಗೆ ಶೀಘ್ರವೇ ದರ ಏರಿಕೆ ಶಾಕ್?: ಪೆಟ್ರೋಲ್ ರೇಟ್ 5 ರೂ. ಹೆಚ್ಚಳ ಸಾಧ್ಯತೆ
ಪಂಚರಾಜ್ಯ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್, ಡೀಸೆಲ್ ಮತ್ತು ಗೃಹಬಳಕೆ ಸಿಲಿಂಡರ್ ಬೆಲೆ ಏರಿಕೆ ಸನ್ನಿಹಿತವಾಗಿದೆ. ಈಗಾಗಲೇ ವಾಣಿಜ್ಯ ಸಿಲಿಂಡರ್ ಬೆಲೆ ಹೆಚ್ಚಳದ ನಂತರ, ಕೇಂದ್ರ ಸರ್ಕಾರವು ಇಂಧನ ದರ ಹೆಚ್ಚಳಕ್ಕೆ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಪ್ರತಿ ಲೀಟರ್ ಪೆಟ್ರೋಲ್‌ಗೆ 4-5 ರೂ. ಮತ್ತು ಗೃಹಬಳಕೆ ಸಿಲಿಂಡರ್‌ಗೆ 50 ಏರಿಕೆಯಾಗುವ ಆತಂಕ ಎದುರಾಗಿದೆ.
ಬೆಂಗಳೂರು, ಮೇ 02: ಪಂಚರಾಜ್ಯ ಚುನಾವಣೆಗಳು ಮುಕ್ತಾಯಗೊಂಡ ಬೆನ್ನಲ್ಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಕೇಂದ್ರ ಸರ್ಕಾರವು ಇಂಧನ ದರ ಹೆಚ್ಚಳಕ್ಕೆ ಸಿದ್ಧತೆ ನಡೆಸಿದ್ದು, ಈಗಾಗಲೇ ವಾಣಿಜ್ಯ ಸಿಲಿಂಡರ್ ದರವನ್ನು 993 ರೂ. ಏರಿಕೆ ಮಾಡಿದೆ. ಇದರ ಬೆನ್ನಲ್ಲೇ ತೈಲ ದರ ಏರಿಕೆಯ ಬಿಸಿ ಜನಸಾಮಾನ್ಯರಿಗೆ ತಟ್ಟುವ ಭೀತಿ ಇದೆ. ಮುಂದಿನ ಐದರಿಂದ ಆರು ದಿನಗಳಲ್ಲಿ ಪೆಟ್ರೋಲ್ ದರ ಏರಿಕೆಯಾಗುವ ನಿರೀಕ್ಷೆಯಿದ್ದು, ಪ್ರತಿ ಲೀಟರ್ ಪೆಟ್ರೋಲ್‌ಗೆ ಸುಮಾರು 4 ರಿಂದ 5 ರೂ. ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ. ಇದಲ್ಲದೆ, ಗೃಹಬಳಕೆ ಸಿಲಿಂಡರ್ ಬೆಲೆ ಕೂಡ 50 ರೂ. ಏರಿಕೆಯಾಗುವ ಲಕ್ಷಣಗಳಿವೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಕೆಪಿಎಸ್ಸಿ ನೇಮಕಾತಿ ಹಗರಣ: 1.5 ಕೋಟಿ, 22 ಲಕ್ಷದ ಚಿನ್ನಾಭರಣ ಜಪ್ತಿ
ಕೈ ಕೈ ಮಿಲಾಯಿಸುವ ಹಂತಕ್ಕೆ ಹೋದ ‘ಬಿಗ್ ಬಾಸ್ ಕನ್ನಡ 13’ ಶೋ ಸ್ಪರ್ಧಿಗಳು
ಕೊಪ್ಪಳದಲ್ಲಿ ಕೋತಿಯ ಚೇಷ್ಟೆಯಿಂದ ಪ್ರಾಣ ಕಳೆದುಕೊಂಡ 91 ವರ್ಷದ ಅಜ್ಜಿ!
ಗುಜರಾತ್ನಲ್ಲಿ ಭಕ್ತರಿಗೆ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ ಹಚ್ಚಿದ ಜನರು!

