ದೇಶದ ಜನರಿಗೆ ಶೀಘ್ರವೇ ದರ ಏರಿಕೆ ಶಾಕ್​​?: ಪೆಟ್ರೋಲ್​​ ರೇಟ್​​ 5 ರೂ. ಹೆಚ್ಚಳ ಸಾಧ್ಯತೆ

Updated on: May 02, 2026 | 6:22 AM

ಪಂಚರಾಜ್ಯ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್, ಡೀಸೆಲ್ ಮತ್ತು ಗೃಹಬಳಕೆ ಸಿಲಿಂಡರ್ ಬೆಲೆ ಏರಿಕೆ ಸನ್ನಿಹಿತವಾಗಿದೆ. ಈಗಾಗಲೇ ವಾಣಿಜ್ಯ ಸಿಲಿಂಡರ್ ಬೆಲೆ ಹೆಚ್ಚಳದ ನಂತರ, ಕೇಂದ್ರ ಸರ್ಕಾರವು ಇಂಧನ ದರ ಹೆಚ್ಚಳಕ್ಕೆ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಪ್ರತಿ ಲೀಟರ್ ಪೆಟ್ರೋಲ್‌ಗೆ 4-5 ರೂ. ಮತ್ತು ಗೃಹಬಳಕೆ ಸಿಲಿಂಡರ್‌ಗೆ 50 ಏರಿಕೆಯಾಗುವ ಆತಂಕ ಎದುರಾಗಿದೆ.

ಬೆಂಗಳೂರು, ಮೇ 02: ಪಂಚರಾಜ್ಯ ಚುನಾವಣೆಗಳು ಮುಕ್ತಾಯಗೊಂಡ ಬೆನ್ನಲ್ಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಕೇಂದ್ರ ಸರ್ಕಾರವು ಇಂಧನ ದರ ಹೆಚ್ಚಳಕ್ಕೆ ಸಿದ್ಧತೆ ನಡೆಸಿದ್ದು, ಈಗಾಗಲೇ ವಾಣಿಜ್ಯ ಸಿಲಿಂಡರ್ ದರವನ್ನು 993 ರೂ. ಏರಿಕೆ ಮಾಡಿದೆ. ಇದರ ಬೆನ್ನಲ್ಲೇ ತೈಲ ದರ ಏರಿಕೆಯ ಬಿಸಿ ಜನಸಾಮಾನ್ಯರಿಗೆ ತಟ್ಟುವ ಭೀತಿ ಇದೆ. ಮುಂದಿನ ಐದರಿಂದ ಆರು ದಿನಗಳಲ್ಲಿ ಪೆಟ್ರೋಲ್ ದರ ಏರಿಕೆಯಾಗುವ ನಿರೀಕ್ಷೆಯಿದ್ದು, ಪ್ರತಿ ಲೀಟರ್ ಪೆಟ್ರೋಲ್‌ಗೆ ಸುಮಾರು 4 ರಿಂದ 5 ರೂ. ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ. ಇದಲ್ಲದೆ, ಗೃಹಬಳಕೆ ಸಿಲಿಂಡರ್ ಬೆಲೆ ಕೂಡ 50 ರೂ. ಏರಿಕೆಯಾಗುವ ಲಕ್ಷಣಗಳಿವೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More