AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

W,W,W,W,W: ಇಮ್ರಾನ್ ತಾಹಿರ್ ಸ್ಪಿನ್ ಮೋಡಿಗೆ ಮಂಡಿಯೂರಿದ ಎದುರಾಳಿ ಪಡೆ

W,W,W,W,W: ಇಮ್ರಾನ್ ತಾಹಿರ್ ಸ್ಪಿನ್ ಮೋಡಿಗೆ ಮಂಡಿಯೂರಿದ ಎದುರಾಳಿ ಪಡೆ

ಝಾಹಿರ್ ಯೂಸುಫ್
|

Updated on: Aug 23, 2025 | 1:30 PM

Share

Antigua and Barbuda Falcons vs Guyana Amazon Warriors: ಮೊದಲು ಬ್ಯಾಟ್ ಮಾಡಿದ ಗಯಾನಾ ಅಮೆಝಾನ್ ವಾರಿಯರ್ಸ್ ಪರ ವಿಕೆಟ್ ಕೀಪರ್ ಬ್ಯಾಟರ್ ಶಾಯ್ ಹೋಪ್ 5 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 54 ಎಸೆತಗಳಲ್ಲಿ 82 ರನ್​ ಬಾರಿಸಿದರು. ಇನ್ನು ಶಿಮ್ರಾನ್ ಹೆಟ್ಮೆಯರ್ 26 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 65 ರನ್​ ಚಚ್ಚಿದರು. ಈ ಮೂಲಕ ಗಯಾನಾ ಅಮೆಝಾನ್ ವಾರಿಯರ್ಸ್ ತಂಡವು 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 211 ರನ್​ ಕಲೆಹಾಕಿತು.

ವೆಸ್ಟ್ ಇಂಡೀಸ್​ನಲ್ಲಿ ನಡೆಯುತ್ತಿರುವ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಇಮ್ರಾನ್ ತಾಹಿರ್ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದಾರೆ. ಅಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಅಂಟಿಗುವಾ ಅ್ಯಂಡ್ ಬಾರ್ಬುಡಾ ಫಾಲ್ಕನ್ಸ್ ಮತ್ತು ಗಯಾನಾ ಅಮೆಝಾನ್ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಗಯಾನಾ ಅಮೆಝಾನ್ ವಾರಿಯರ್ಸ್ ತಂಡದ ನಾಯಕ ಇಮ್ರಾನ್ ತಾಹಿರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಗಯಾನಾ ಅಮೆಝಾನ್ ವಾರಿಯರ್ಸ್ ಪರ ವಿಕೆಟ್ ಕೀಪರ್ ಬ್ಯಾಟರ್ ಶಾಯ್ ಹೋಪ್ 5 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 54 ಎಸೆತಗಳಲ್ಲಿ 82 ರನ್​ ಬಾರಿಸಿದರು. ಇನ್ನು ಶಿಮ್ರಾನ್ ಹೆಟ್ಮೆಯರ್ 26 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 65 ರನ್​ ಚಚ್ಚಿದರು. ಈ ಮೂಲಕ ಗಯಾನಾ ಅಮೆಝಾನ್ ವಾರಿಯರ್ಸ್ ತಂಡವು 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 211 ರನ್​ ಕಲೆಹಾಕಿತು.

212 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಅಂಟಿಗುವಾ ಅ್ಯಂಡ್ ಬಾರ್ಬುಡಾ ಫಾಲ್ಕನ್ಸ್ ಕೇವಲ 128 ರನ್​ಗಳಿಗೆ ಆಲೌಟ್ ಆಯಿತು. ಹೀಗೆ ಅಲ್ಪ ಮೊತ್ತಕ್ಕೆ ಆಲೌಟ್ ಆಗಲು ಮುಖ್ಯ ಕಾರಣ ಇಮ್ರಾನ್ ತಾಹಿರ್. 4 ಓವರ್​ಗಳನ್ನು ಎಸೆದ ಇಮ್ರಾನ್ ತಾಹಿರ್ ಕೇವಲ 21 ರನ್ ನೀಡಿ 5 ವಿಕೆಟ್ ಕಬಳಿಸಿದರು. ಈ ಮೂಲಕ 15.2 ಓವರ್​ಗಳಲ್ಲಿ ಅಂಟಿಗುವಾ ಅ್ಯಂಡ್ ಬಾರ್ಬುಡಾ ಫಾಲ್ಕನ್ಸ್ ತಂಡವನ್ನು 128 ರನ್​ಗಳಿಗೆ ಆಲೌಟ್ ಮಾಡಿ ಗಯಾನಾ ಅಮೆಝಾನ್ ವಾರಿಯರ್ಸ್ ತಂಡವು 83 ರನ್​ಗಳ ಭರ್ಜರಿ ಜಯ ಸಾಧಿಸಿದೆ.