ಸಿಎಂ ಮನೆಗೆ ಡಿಸಿಎಂ ಭೇಟಿ, ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್ ಆಗಮನ

Updated on: Oct 09, 2024 | 1:33 PM

ಶಿವಕುಮಾರ್ ಸಿಎಂ ಮನೆಗೆ ಹೋಗುವ ಮೊದಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿದ್ದರಾಮಯ್ಯ ಭೇಟಿಗೆ ಬಂದಿದ್ದರು. ಅವರ ಮತ್ತು ಶಿವಕುಮಾರ್ ಭೇಟಿಯ ನಡುವೆ ಏನಾದರೂ ಸಂಬಂಧವಿರಬಹುದಾ ಎಂದು ರಾಜಕೀಯ ವಲಯದಲ್ಲಿ ಚರ್ಚೆ ಶುರುವಾಗಿದೆ.

ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿವಾಸಕ್ಕೆ ಭೇಟಿ ನೀಡಿದ್ದು ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಮೂಡಿಸಿದೆ. ನಿನ್ನೆ ಮೈಸೂರಲ್ಲಿ ದಲಿತ ಕಾಂಗ್ರೆಸ್ ನಾಯಕರು ಡಿನ್ನರ್ ಮೀಟಿಂಗ್ ನಡೆಸಿದ್ದು ಶಿವಕುಮಾರ್ ಮುಖ್ಯಮಂತ್ರಿಯವರ ನಿವಾಸಕ್ಕೆ ಏಕಾಏಕಿ ಬಂದಿದ್ದರ ಹಿಂದಿನ ಗಹನ ಕಾರಣ ಆಗಿರಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಎತ್ತಿನಹೊಳೆ ನೆಪದಲ್ಲಿ ಪರಮೇಶ್ವರ್, ಡಿಕೆ ಶಿವಕುಮಾರ್ ಭೇಟಿ: ಕುತೂಹಲಕ್ಕೆ ಕಾರಣವಾದ ಸಿಎಂ ಸ್ಥಾನ ಆಕಾಂಕ್ಷಿಗಳ ಮಾತುಕತೆ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More