ಮಂಗಳವಾರ ದೆಹಲಿಯಲ್ಲಿ ಕುಮಾರಸ್ವಾಮಿ ಜೊತೆ ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್!

ಅರುಣ್​ ಕುಮಾರ್​ ಬೆಳ್ಳಿ

Updated on: Mar 26, 2025 | 2:38 PM

ನಿನ್ನೆ ರಾತ್ರಿ ಜೊತೆಯಾಗಿ ಊಟ ಮಾಡಿದ ಬಳಿಕ ಸತೀಶ್ ಜಾರಕಿಹೊಳಿ ಇಂದು ಪಾರ್ಲಿಮೆಂಟ್ ಕಚೇರಿಯಲ್ಲಿ ಕುಮಾರಸ್ವಾಮಿಯವರನ್ನು ಭೇಟಿಯಾಗಿದ್ದರೆಂದು ನಮ್ಮ ದೆಹಲಿ ವರದಿಗಾರ ಹೇಳುತ್ತಾರೆ. ಕೆಎನ್ ರಾಜಣ್ಣ ಪ್ರಸ್ತಾಪಿಸಿರುವ ಹನಿ ಟ್ರ್ಯಾಪ್ ವಿಷಯವನ್ನು ಸತೀಶ್ ಗಂಭಿರವಾಗಿ ಪರಿಗಣಿಸಿದ್ದು ಅದನ್ನು ಮೊನ್ನೆ ಎಐಸಿಸಿ ನಾಯಕರ ಜೊತೆ ಕೂಡ ಚರ್ಚಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಏನೆಲ್ಲ ನಡೆಯುತ್ತಿದೆಯೋ?

ಬೆಂಗಳೂರು, ಮಾರ್ಚ್ 26: ದುಶ್ಮನ್ ಕಾ ದುಶ್ಮನ್ ದೋಸ್ತ್ ಅಂತ ಹಿಂದಿಯಲ್ಲಿ ಗಾದೆ ಮಾತೊಂದಿದೆ. ಇದನ್ನು ಯಾಕೆ ಹೇಳಬೇಕಾಗಿದೆಯೆಂದರೆ, ನಿನ್ನೆ ರಾತ್ರಿ ದೆಹಲಿಯಲ್ಲಿ ಲೋಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ ಅವರು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರನ್ನು ಭೇಟಿಯಾಗಿದ್ದೂ ಅಲ್ಲದೆ ಜೊತೆಯಾಗಿ ಡಿನ್ನರ್ ಕೂಡ ಮಾಡಿದ್ದಾರೆ. ಡಿನ್ನರ್​​ಗೆ ಆಹ್ವಾನ ನೀಡಿದ್ದು ಕುಮಾರಸ್ವಾಮಿಯವರಂತೆ. ಅವರಿಬ್ಬರು ಜೊತೆಯಾಗಿ ಕುಳಿತು ಮಾತಾಡುತ್ತಿರುವ ಫೋಟೋ ಟಿವಿ9ಗೆ ಲಭ್ಯವಾಗಿವೆ. ರಾಜ್ಯ ರಾಜಕೀಯದಲ್ಲಿ ಈಗ ನಡೆಯುತ್ತಿರುವ ವಿದ್ಯಮಾನಗಳ ಹಿನ್ನೆಲೆಯಲ್ಲಿ ಇವರಿಬ್ಬರ ಭೇಟಿ ತೀವ್ರ ಕುತೂಹಲ ಮೂಡಿಸಿದೆ.

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಕೇತಗಾನಹಳ್ಳಿ ಭೂ ಒತ್ತುವರಿ ಆರೋಪ: ನೋಟಿಸ್‌ ವಿರುದ್ಧ ಕೋರ್ಟ್​ ಮೆಟ್ಟಿಲೇರಿದ ಕುಮಾರಸ್ವಾಮಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.