ಪ್ರದೀಪ್ ಈಶ್ವರ್ ಪ್ರಕಾರ ಡಿಕೆ ಸುರೇಶ್ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ

ಅರುಣ್​ ಕುಮಾರ್​ ಬೆಳ್ಳಿ

Updated on: Oct 16, 2024 | 12:57 PM

ಚನ್ನಪಟ್ಟಣ ಕ್ಷೇತ್ರ ಡಿಕೆ ಶಿವಕುಮಾರ್ ಮತ್ತು ಹೆಚ್ ಡಿ ಕುಮಾರಸ್ವಾಮಿಯ ನಡುವೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅಭ್ಯರ್ಥಿಯ ಹೆಸರು ಘೋಷಣೆ ಮಾಡಿಲ್ಲ, ಕುಮಾರಸ್ವಾಮಿ ತಮ್ಮ ಮಗನನ್ನು ಕಣಕ್ಕಿಳಿಸುವ ನಿರ್ಧಾರ ಮಾಡಿದಂತಿದೆ.

ಚಿಕ್ಕಬಳ್ಳಾಪುರ: ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಯಾರು ಅಂತ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಮಾಡಿಲ್ಲ ಅದರೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮಾತ್ರ ಡಿಕೆ ಸುರೇಶ್ ಅವರೇ ಸ್ಪರ್ಧಿಸಲಿ ಎನ್ನುತ್ತಿದ್ದಾರೆ. ಸುರೇಶ್ ಸ್ಪರ್ಧಿಸಿದರೆ ತಾನು ಮನೆ ಮನೆಗೆ ತೆರಳಿ ಅವರ ಪರ ಪ್ರಚಾರ ಮಾಡುವುದಾಗಿ ಶಾಸಕ ಹೇಳುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಚನ್ನಪಟ್ಟಣ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯೇ ಸ್ಪರ್ಧಿಸೋದು ಅಂತ ಅಪರೋಕ್ಷವಾಗಿ ಹೇಳಿದ ನಿಖಿಲ್

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.