ರಸ್ತೆ ದಾಟುತ್ತಿದ್ದಾಗ ಕ್ಯಾಂಟರ್ ಡಿಕ್ಕಿ ಹೊಡೆದು ಯುವಕ ಸಾವು; ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

|

Updated on: Aug 01, 2024 | 4:00 PM

ಆನೇಕಲ್(Anekal) ತಾಲೂಕಿನ ಮರಸೂರು ಬಳಿ ಕ್ಯಾಂಟರ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಇನ್ನು ಡಿಕ್ಕಿ ಹೊಡೆದು ಕ್ಯಾಂಟರ್ ಚಾಲಕ ಪರಾರಿ ಆಗಿದ್ದು, ಘಟನೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಕುರಿತು ಬಸೂರ್ಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಎಸ್ಕೇಪ್​ ಆದ ಚಾಲಕನಿಗೆ ಹುಡುಕಾಟ ನಡೆಸಿದ್ದಾರೆ.

ಬೆಂಗಳೂರು ಗ್ರಾಮಾಂತರ, ಆ.01: ರಸ್ತೆ ದಾಟುತ್ತಿದ್ದ ಯುವಕನಿಗೆ ಕ್ಯಾಂಟರ್ ಡಿಕ್ಕಿ ಹೊಡೆದು ಆತ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಿನ್ನೆ(ಜು.31) ರಾತ್ರಿ ಆನೇಕಲ್(Anekal) ತಾಲೂಕಿನ ಮರಸೂರು ಬಳಿ ನಡೆದಿದೆ. 19 ವರ್ಷದ ಯುವಕ ಆಕಾಶ್,ಮೃತ ರ್ದುದೈವಿ. ಡಿಕ್ಕಿ ಹೊಡೆದು ಕ್ಯಾಂಟರ್ ಚಾಲಕ ಪರಾರಿ ಆಗಿದ್ದಾನೆ. ಘಟನೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಲಬುರಗಿ ಮೂಲದ ಆಕಾಶ್, ಆನೇಕಲ್ ಚಂದಾಪುರ ಮುಖ್ಯ ರಸ್ತೆಯ ಬಾರ್ ಒಂದರಲ್ಲಿ ವಾಚ್ ಮ್ಯಾನ್ ಆಗಿದ್ದ ತಂದೆ ನೋಡಲು ಬಂದಿದ್ದ. ಅದರಂತೆ ತಂದೆ ಮಾತನಾಡಿಸಿಕೊಂಡು ರಸ್ತೆ ದಾಟಲು ಮುಂದಾಗಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದು ದುರ್ಘಟನೆ ನಡೆದಿದೆ. ಎಸ್ಕೇಪ್ ಆಗಿರುವ ಟ್ಯಾಕ್ಟರ್ ಚಾಲಕನಿಗೆ ಸೂರ್ಯನಗರ ಪೊಲೀಸರ ಹುಡುಕಾಟ ನಡೆಸಿದ್ದು, ಸಿಸಿ ಟಿವಿಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ