AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಹೆಚ್ಚಾಗ್ತಿದೆ ಪುಂಡರ ಅಟ್ಟಹಾಸ; ಯುವಕ-ಯುವತಿ ಇದ್ದ ಬೈಕ್ ಅಡ್ಡ ಹಾಕಿ ಹಲ್ಲೆ

ಬೆಂಗಳೂರಿನಲ್ಲಿ ಹೆಚ್ಚಾಗ್ತಿದೆ ಪುಂಡರ ಅಟ್ಟಹಾಸ; ಯುವಕ-ಯುವತಿ ಇದ್ದ ಬೈಕ್ ಅಡ್ಡ ಹಾಕಿ ಹಲ್ಲೆ

ರಾಚಪ್ಪಾಜಿ ನಾಯ್ಕ್
| Edited By: |

Updated on:Feb 18, 2024 | 2:06 PM

Share

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಪುಂಡರ ಹಾವಳಿ ಹೆಚ್ಚಾಗುತ್ತಿದೆ. ಅದರಂತೆ ಇದೀಗ ಮಾರತಹಳ್ಳಿ ಹಾಗೂ ವರ್ತೂರು ಮುಖ್ಯರಸ್ತೆಯಲ್ಲಿ ಯುವಕ-ಯುವತಿ ಬೈಕ್​​ನಲ್ಲಿ ಹೋಗುತ್ತಿದ್ದಾಗ ಅಡ್ಡ ಹಾಕಿದ ಪುಂಡರು ಹಲ್ಲೆ ಮಾಡಿದ ಘಟನೆ ನಡೆದಿದೆ.

ಬೆಂಗಳೂರು, ಫೆ.18: ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ(Bengaluru) ಪುಂಡರ ಹಾವಳಿ ಮೀತಿಮಿರಿದೆ. ಈ ಕುರಿತು ಅನೇಕ ಪ್ರಕರಣಗಳು ದಾಖಲಾಗುತ್ತಿದ್ದರೂ ಇದಕ್ಕೆ ಪೊಲೀಸರು ಬ್ರೇಕ್​ ಹಾಕಲಾಗುತ್ತಿಲ್ಲ. ಈ ಹಿನ್ನಲೆ ಕಳೆದ ಎರಡು ದಿನದ ಹಿಂದೆ ಮಾರತಹಳ್ಳಿ ಹಾಗೂ ವರ್ತೂರು ಮುಖ್ಯರಸ್ತೆಯಲ್ಲಿ ಪುಂಡರು ಅಟ್ಟಹಾಸ ಮೆರೆದಿದ್ದಾರೆ. ಯುವಕ-ಯುವತಿ ಇದ್ದ ಬೈಕ್​ನ್ನು ಅಡ್ಡ ಹಾಕಿದ ಯುವಕರು, ಬೈಕ್ ಬೀಳಿಸಿ ಹಲ್ಲೆ ಆತನ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡುತ್ತಿರುವ ದೃಶ್ಯ ಕಾರಿನಲ್ಲಿ ಕುಳಿತಿದ್ದವರು ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾರೆ. ಈ ಘಟನೆ ಹೆಚ್ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಗಳಿಗೆ ಪೊಲೀಸರು ಬುದ್ಧಿ ಹೇಳಿ ಕಳುಹಿಸಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published on: Feb 18, 2024 02:06 PM
Follow Us
Rachappaji Naik S
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More