ಬೆಂಗಳೂರು ಮಳೆ ಅವಾಂತರ: ನಡು ರಸ್ತೆಯಲ್ಲೇ ಸಿಲುಕಿದ ಶಾಲಾ ವಾಹನ; ಚಾಲಕ, ಮಕ್ಕಳು ಕಂಗಾಲು

Edited By: ಕಿರಣ್ ಹನುಮಂತ್​ ಮಾದಾರ್

Updated on: Oct 15, 2024 | 7:07 PM

ಬೆಂಗಳೂರಿನಲ್ಲಿ ವರುಣಾರ್ಭಟ ಜೋರಾಗಿದ್ದು, ಅವಾಂತರಗಳು ಸೃಷ್ಟಿಯಾಗಿವೆ. ಅದರಂತೆ ಯಮಲೂರು- ಬೆಳ್ಳಂದೂರಿ ನಡು ರಸ್ತೆಯಲ್ಲಿ ಶಾಲಾ ವಾಹನ ಸಿಲುಕಿರುವ ಘಟನೆ ನಡೆದಿದ್ದು, ಭಾರಿ ನೀರು ಕಂಡು ಚಾಲಕ, ಶಾಲಾ ಮಕ್ಕಳು ಆತಂಕಕ್ಕೆ ಒಳಗಾಗಿದ್ದರು. ನಂತರ ಸುರಕ್ಷಿತ ಸ್ಥಳಕ್ಕೆ ಮಕ್ಕಳು ಬಂದ ಬಳಿಕ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ.

ಬೆಂಗಳೂರು, ಅ.15: ಬೆಂಗಳೂರಿನಲ್ಲಿ ವರುಣಾರ್ಭಟ ಜೋರಾಗಿದ್ದು, ಅವಾಂತರಗಳು ಸೃಷ್ಟಿಯಾಗಿವೆ. ಅದರಂತೆ ಯಮಲೂರು- ಬೆಳ್ಳಂದೂರಿ ನಡು ರಸ್ತೆಯಲ್ಲಿ ಶಾಲಾ ವಾಹನ ಸಿಲುಕಿರುವ ಘಟನೆ ನಡೆದಿದ್ದು, ಭಾರಿ ನೀರು ಕಂಡು ಚಾಲಕ, ಶಾಲಾ ಮಕ್ಕಳು ಆತಂಕಕ್ಕೆ ಒಳಗಾಗಿದ್ದರು. ಅರ್ಧ ಬಸ್ ಮುಳುಗಿದ್ದ ಹಿನ್ನಲೆ ಅಪಾಯವನ್ನ ಅರಿತ ಚಾಲಕ​ ವಾಪಸ್ ಹಿಂದಕ್ಕೆ ಸ್ಕೂಲ್ ಬಸ್ ತೆಗೆದುಕೊಂಡು ಬಂದಿದ್ದಾನೆ. ಬಳಿಕ ಪೋಷಕರು ಮಕ್ಕಳನ್ನ ಬಸ್​ನಿಂದ ಇಳಿಸಿಕೊಳ್ಳಲು ರಸ್ತೆಗೆ ಬಂದಿದ್ದು, ಕೆಲ ಕಾಲ ಆತಂಕದ ಸ್ಥಿತಿ ನಿರ್ಮಾಣವಾಗಿತ್ತು. ಸುರಕ್ಷಿತ ಸ್ಥಳಕ್ಕೆ ಮಕ್ಕಳು ಬಂದ ಬಳಿಕ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More