ಬೆಳಗಾವಿ: ರಾಜ್ಯದ ಒಂದು ಭಾಗದಲ್ಲಿ ಮಳೆಯಾಗುತ್ತಿದ್ದರೆ, ಇನ್ನೊಂದು ಕಡೆ ಮಳೆಯಾಗದೇ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಅದರಂತೆ ಮಳೆ ಬರಲಿ ಎಂದು ಇದೀಗ ಜನರು ಕತ್ತೆಗಳಿಗೆ ಮದುವೆ ಮಾಡಿಸಿದ್ದಾರೆ. ಹೌದು ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ಮಳೆ ಬರಲಿ ಎಂದು ಕತ್ತೆಗಳಿಗೆ ಮದುವೆ ಮಾಡಿಸಿದ್ದಾರೆ. ಮಳೆಯಾಗದೇ ಬರಗಾಲದ ಆತಂಕದಲ್ಲಿರುವ ಜನರು ವರುಣನ ಆಗಮನಕ್ಕೆ ಪ್ರಾರ್ಥಿಸಿ ಶಾಸ್ತ್ರೋಕ್ತವಾಗಿ ಕತ್ತೆಗಳಿಗೆ ಸೀರೆ ತೊಡಿಸಿ ವಾದ್ಯಮೇಳದೊಂದಿಗೆ ಮದುವೆ ಮಾಡಿಸಿ ದೇವರಲ್ಲಿ ಪ್ರಾರ್ಥನೆ ಮಾಡಿದ್ದಾರೆ. ಕತ್ತೆಗಳಿಗೆ ಮದುವೆ ಮಾಡಿಸಿದರೆ ಮಳೆ ಬರುತ್ತೆ ಎಂಬ ನಂಬಿಕೆ ಇಲ್ಲಿನ ಗ್ರಾಮಸ್ಥರದ್ದು.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:09 am, Sat, 10 June 23