ಬೆಂಗಳೂರು: ಠಾಣೆಗೆ ಮುತ್ತಿಗೆ ಹಾಕಿದ ಶಾಸಕನ​ ಮುಂದೆಯೇ ACP ಚಂದನ್ ಕುಮಾರ್ ಆಕ್ರೋಶ

|

Updated on: Aug 25, 2024 | 5:23 PM

ಕೆಪಿಎಸ್ಸಿ ಪರೀಕ್ಷೆ ಮುಂದೂಡಬೇಕೆಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಬೇಕಿದ್ದ ವಿದ್ಯಾರ್ಥಿಗಳ ಬಂಧನ ಖಂಡಿಸಿ ವಿಜಯನಗರ ಠಾಣೆಗೆ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಮುತ್ತಿಗೆ ಹಾಕಿ ಮನವಿ ಸಲ್ಲಿಸಿದ್ದಾರೆ. ಈ ವೇಳೆ ಎಸಿಪಿ ಚಂದನ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದು, ವಿಡಿಯೋ ಇಲ್ಲಿದೆ.

ಬೆಂಗಳೂರು, ಆ.25: ಕೆಪಿಎಸ್ಸಿ ಪರೀಕ್ಷೆ ಮುಂದೂಡಬೇಕೆಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಬೇಕಿದ್ದ ವಿದ್ಯಾರ್ಥಿಗಳ ಬಂಧನ ಖಂಡಿಸಿ ವಿಜಯನಗರ ಠಾಣೆಗೆ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಮುತ್ತಿಗೆ ಹಾಕಿ ಮನವಿ ಸಲ್ಲಿಸಿದ್ದಾರೆ. ಈ ವೇಳೆ ಎಸಿಪಿ ಚಂದನ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದು, ಯಾರು ನಿಮ್ಮನ್ನ ಒಳಕ್ಕೆ ಬಿಟ್ಟಿದ್ದು, ಶಾಸಕ ಧೀರಜ್ ಮುನಿರಾಜು ಸೇರಿ ಎಲ್ಲರನ್ನ ಒಳಗೆ ಪೊಲೀಸರು ಕರೆದೊಯ್ದಿದ್ದಾರೆ. ಈ ವೇಳೆ ಪೊಲೀಸರೊಂದಿಗೆ ಪ್ರತಿಭಟನಾಕಾರರು ವಾಗ್ವಾದ ನಡೆಸಿದ್ದಾರೆ.

ವಿಜಯನಗರ ಮೆಟ್ರೋ ಸ್ಟೇಷನ್ ಬಳಿ ಇಂದು ಸಂಜೆ ಸಿಎಂ ಕಾರ್ಯಕ್ರಮ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಶಾಸಕ ಧೀರಜ್ ಮುನಿರಾಜು ಸೇರಿದಂತೆ ಹಲವರನ್ನು ಪೊಲೀಸ್ ವಶಕ್ಕೆ ಪಡೆದಿದ್ದಾರೆ. ಈ ವೇಳೆ ಓರ್ವನ ತಲೆಗೆ ಗಾಯವಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ