AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್: ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ಲ್ಯಾಬ್ ಟೆಕ್ನಿಷಿಯನ್‌; ದಂಗಾದ ರೋಗಿಗಳು

ಬೀದರ್: ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ಲ್ಯಾಬ್ ಟೆಕ್ನಿಷಿಯನ್‌; ದಂಗಾದ ರೋಗಿಗಳು

ಸುರೇಶ ನಾಯಕ
| Edited By: |

Updated on: Aug 03, 2024 | 4:31 PM

Share

ಬೀದರ್(Bidar) ಜಿಲ್ಲೆಯ ಹುಲಸೂರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಯೊಬ್ಬರು ಮದ್ಯ ಸೇವಿಸಿ ಸೇವೆಗೆ ಹಾಜರಾದ ಘಟನೆ ನಡೆದಿದ್ದು, ಚಿಕಿತ್ಸೆಗೆ‌ ಬಂದ ರೋಗಿಗಳು ದಂಗಾಗಿದ್ದಾರೆ. ಕೂಡಲೇ ಸಿಬ್ಬಂದಿಯನ್ನು ಡ್ರಿಂಕ್ ಟೇಸ್ಟ್​ಗೆ ಬಸವಕಲ್ಯಾಣ ತಾಲೂಕಾ ಆಸ್ಪತ್ರೆಗೆ ಪೊಲೀಸರು ಕರೆದೊಯ್ದಿದ್ದಾರೆ.

ಬೀದರ್, ಆ.03: ಆರೋಗ್ಯ ಇಲಾಖೆ ಸಿಬ್ಬಂದಿಯೊಬ್ಬರು ಮದ್ಯ ಸೇವಿಸಿ ಸೇವೆಗೆ ಹಾಜರಾದ ಘಟನೆ ಬೀದರ್(Bidar) ಜಿಲ್ಲೆಯ ಹುಲಸೂರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ಲ್ಯಾಬ್ ಟೆಕ್ನಿಷಿಯನ್(Lab Technician) ಬಾಲಾಜಿ ಸೂರ್ಯವಂಶಿಗೆ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಕ್ತ ತಪಾಸಣೆಗೆ ಬಂದ ರೋಗಿಗಳ ಜೊತೆಗೆ ಉದ್ಧಟತನದ ಮಾತಾಡುತ್ತಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಆಸ್ಪತ್ರೆಯ ಸಿಬ್ಬಂದಿ ಸ್ಥಿತಿಯನ್ನು ಕಂಡು ಚಿಕಿತ್ಸೆಗೆ‌ ಬಂದ ರೋಗಿಗಳು ದಂಗಾಗಿದ್ದಾರೆ. ನಿತ್ಯ ಮದ್ಯ ಸೇವಿಸಿ ಸೇವೆಗೆ ಹಾಜರಾಗುತ್ತಿರೋ ಲ್ಯಾಬ್ ಟೆಕ್ನಿಷಿಯನ್ ಬಾಲಾಜಿ ಸೂರ್ಯವಂಶಿಗೆ ಈ ಹಿಂದೆಯೇ ಆರೋಗ್ಯ ಇಲಾಖೆ ಶೋಕಾಸ್ ನೋಟಿಸ್ ನೀಡಿ, ಆತನ ಸಂಬಳವನ್ನೂ ತಡೆ ಹಿಡಿದಿದ್ದರು. ಆದರೂ ಮದ್ಯ ಸೇವಿಸಿ ಬರುತ್ತಿರೋ ಸಿಬ್ಬಂದಿಯ ವಿರುದ್ಧ ಕ್ರಮ ಜರುಗಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಇನ್ನು ಈ ಕುರಿತು ಮದ್ಯ ಸೇವಿಸಿ ಸೇವೆಗೆ ಹಾಜರಾದ ಸಿಬ್ಬಂದಿಯನ್ನು ಡ್ರಿಂಕ್ ಟೇಸ್ಟ್​ಗೆ ಬಸವಕಲ್ಯಾಣ ತಾಲೂಕಾ ಆಸ್ಪತ್ರೆಗೆ ಪೊಲೀಸರು ಕರೆದೊಯ್ದಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Suresh Naik
Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More