Karnataka Assembly Polls: ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಸರ್ಕಾರ ರಚಿಸುತ್ತಾ ಎಂಬ ಪ್ರಶ್ನೆಗೆ ಎಂಪಿ ರೇಣುಕಾಚಾರ್ಯ ಕೊಟ್ಟ ಉತ್ತರವೇನು?
ಪಕ್ಷದ ಮುಖಂಡರಾಗಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಅಮಿತ್ ಶಾ, ಜೆಪಿ ನಡ್ಡಾ, ಬಿ ಎಸ್ ಯಡಿಯೂರಪ್ಪ ಮೊದಲಾದವರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ರೇಣುಕಾಚಾರ್ಯ ಹೇಳಿದರು.
ದಾವಣಗೆರೆ: ನಿನ್ನೆ ಬಿತ್ತರಗೊಂಡ ಮತಗಟ್ಟೆ ಸಮೀಕ್ಷೆಗಳು ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ (clear mandate) ನೀಡಿಲ್ಲ. ಹೆಚ್ಚಿನ ಸಮೀಕ್ಷೆಗಳ ಪ್ರಕಾರ ಕಾಂಗ್ರೆಸ್ ಅತಿಹೆಚ್ಚು ಸ್ಥಾನಗಳನ್ನು ಸ್ಥಾನ ಪಡೆದು ಸಿಂಗಲ್ ಲಾರ್ಜೆಸ್ಟ್ ಪಾರ್ಟಿ (single largest party) ಅನಿಸಿಕೊಳ್ಳಲಿದೆ. ಅತಂತ್ರ ವಿಧಾನಸಭೆ ಸ್ಥಿತಿ ಎದುರಾದರೆ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ ಏರ್ಪಡುತ್ತಾ? ಹೊನ್ನಾಳಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂಪಿ ರೇಣುಕಾಚಾರ್ಯ (MP Renukacharya) ಅವರಿಗೆ ಮಾಧ್ಯಮ ಪ್ರತಿನಿಧಿಗಳು ಈ ಪ್ರಶ್ನೆ ಕೇಳಿದಾಗ, ತಾನು ಈ ಪ್ರಶ್ನೆಗೆ ಉತ್ತರಿಸಲಾಗದು ಎಂದು ಹೇಳಿದರು. ಪಕ್ಷದ ಮುಖಂಡರಾಗಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಅಮಿತ್ ಶಾ, ಜೆಪಿ ನಡ್ಡಾ, ಬಿ ಎಸ್ ಯಡಿಯೂರಪ್ಪ ಮೊದಲಾದವರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ರೇಣುಕಾಚಾರ್ಯ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: May 11, 2023 02:09 PM