ಮಳೆಗೆ ಮನೆಯ ಮೇಲೆ ಬಿದ್ದ ಮರ; ಗಾಯಗೊಂಡ ವೃದ್ಧೆಯನ್ನ ಜೋಳಿಗೆ ಮೂಲಕ ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಚಿಕ್ಕಮಗಳೂರಿನಲ್ಲಿ ಬಿರುಗಾಳಿ ಸಹಿತ ಮಳೆಯ ಅಬ್ಬರ ಮುಂದುವರೆದಿದ್ದು, ಇಂದು (ಜು.23) ಕಳಸ ತಾಲೂಕಿನ ಕಾರ್ಲೆ ಗ್ರಾಮದಲ್ಲಿ ವೃದ್ದೆಯಿದ್ದ ಮನೆಯ ಮೇಲೆ ಬೃಹತ್ ಮರವೊಂದು ಬಿದ್ದಿದೆ. ಪರಿಣಾಮ ಮನೆಯಲ್ಲಿದ್ದ ವೃದ್ಧೆಗೆ ಗಂಭೀರ ಗಾಯವಾಗಿದ್ದು, ಸರಿಯಾದ ರಸ್ತೆ ಮಾರ್ಗವಿಲ್ಲದೆ, ಗ್ರಾಮಸ್ಥರು ಸೇರಿಕೊಂಡು ಜೋಳಿಗೆ ಮೂಲಕ ಆಸ್ಪತ್ರೆಗೆ ಸಾಗಿಸಿದ್ದಾರೆ.
ಚಿಕ್ಕಮಗಳೂರು, ಜು.23: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಬಿರುಗಾಳಿ ಸಹಿತ ಮಳೆಯ ಅಬ್ಬರ ಮುಂದುವರೆದಿದ್ದು, ಇಂದು (ಮಂಗಳವಾರ) ಬಿರುಗಾಳಿ ಮಳೆಗೆ ಬೃಹತ್ ಮರವೊಂದು ಮನೆಯ ಮೇಲೆ ಮುರಿದು ಬಿದ್ದ ಘಟನೆ ಕಳಸ ತಾಲೂಕಿನ ಕಾರ್ಲೆ ಗ್ರಾಮದಲ್ಲಿ ನಡೆದಿದೆ. ಮರ ಬಿದ್ದ ಪರಿಣಾಮ ಮನೆಯಲ್ಲಿದ್ದ ವೃದ್ಧೆಗೆ ಗಂಭೀರ ಗಾಯವಾಗಿದ್ದು, ಸರಿಯಾದ ರಸ್ತೆ ಮಾರ್ಗವಿಲ್ಲದೆ, ಗ್ರಾಮಸ್ಥರು ಸೇರಿಕೊಂಡು ಜೋಳಿಗೆ ಮೂಲಕ ಆಸ್ಪತ್ರೆಗೆ ಸಾಗಿಸಿದ್ದಾರೆ. ಹೌದು, ಬರೋಬ್ಬರಿ ಮೂರು ಕಿಮೀ ಜೋಳಿಗೆ ಮೂಲಕ ವೃದ್ಧೆಯನ್ನ ಹೊತ್ತೊಕೊಂಡು ಸಾಗಿದ್ದಾರೆ. ಬಳಿಕ ವೃದ್ಧೆ ಬೆಲ್ಲಮ್ಮ (80) ಅವರನ್ನು ಕಳಸ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಈ ಕಾರ್ಲೆ ಗ್ರಾಮಕ್ಕೆ ರಸ್ತೆ ಸರಿಪಡಿಸುವಂತೆ ಗ್ರಾಮಸ್ಥರುಮ, ನೂರಾರು ಬಾರಿ ಮನವಿ ಮಾಡಿದ್ದರು. ಆದರೆ, ಯಾರೊಬ್ಬರು ಈ ಕಡೆ ಮುಖಮಾಡಿಲ್ಲ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಾಪು ಮಾರಿಗುಡಿ ದೇವಸ್ಥಾನಕ್ಕೆ ಕಂಗನಾ ಭೇಟಿ; ಬ್ರಹ್ಮಕಲಶೋತ್ಸವ ಕಾರ್ಯಕ್ರಮ

ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಅಶೋಕ

ಹಿಮಾನಿ ಶವವನ್ನು ಸೂಟ್ಕೇಸ್ನಲ್ಲಿ ಎಳೆದೊಯ್ಯುತ್ತಿರುವ ವಿಡಿಯೋ ಪತ್ತೆ

ಮಹಿಳೆಯರ ಸ್ಫೂರ್ತಿದಾಯಕ ಪಯಣ ಹಂಚಿಕೊಳ್ಳಲು ಪ್ರಧಾನಿ ಮೋದಿ ಅವಕಾಶ
