ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್
ಚಿಕ್ಕೋಡಿ(Chikkodi) ತಾಲೂಕಿನ ಕರೋಶಿ ಗ್ರಾಮದಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆಯಾಗಿದೆ. ಮೆರವಣಿಗೆ ಮೂಲಕ ಯುವಕರು ಗಣಪತಿ ಪ್ರತಿಷ್ಠಾಪನೆಗೆ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಗ್ರಾಮದ ಬಸ್ ನಿಲ್ದಾಣದ ಬಳಿ ಪಟಾಕಿ ಹೊಡೆಯುವ ವಿಚಾರಕ್ಕೆ ವಾಗ್ವಾದ ನಡೆದಿದೆ.
ಬೆಳಗಾವಿ, ಸೆ.07: ಜಿಲ್ಲೆಯ ಚಿಕ್ಕೋಡಿ(Chikkodi) ತಾಲೂಕಿನ ಕರೋಶಿ ಗ್ರಾಮದಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆಯಾಗಿದೆ. ಮೆರವಣಿಗೆ ಮೂಲಕ ಯುವಕರು ಗಣಪತಿ ಪ್ರತಿಷ್ಠಾಪನೆಗೆ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಗ್ರಾಮದ ಬಸ್ ನಿಲ್ದಾಣದ ಬಳಿ ಪಟಾಕಿ ಹೊಡೆಯುವ ವಿಚಾರಕ್ಕೆ ವಾಗ್ವಾದ ನಡೆದಿದೆ. ನೋಡ ನೋಡುತ್ತಿದ್ದಂತೆ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ಪರಸ್ಪರ ಯುವಕರು ಹೊಡೆದಾಡಿಕೊಂಡಿದ್ದಾರೆ. ಬಳಿಕ ಗ್ರಾಮದ ಮುಖಂಡರು ಹುಡುಗರ ಗಲಾಟೆ ಬಿಡಿಸಿ ಬುದ್ಧಿವಾದ ಹೇಳಿದ್ದಾರೆ. ಈ ಕುರಿತು ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us