‘ನನಗೆ ಐಪಿಎಸ್ ಮಾಡಬೇಕು ಎನ್ನುವ ಆಸೆ ಇತ್ತು’; ರಚಿತಾ ರಾಮ್
‘ಕೊವಿಡ್ ಸಾಂಕ್ರಾಮಿಕದ ವೇಳೆ ಪೊಲೀಸರ ಕಾರ್ಯಕ್ಕೆ ನಾನು ಮೆಚ್ಚುಗೆ ಸೂಚಿಸುತ್ತೇನೆ. ನಾನು ಐಪಿಎಸ್ ಮಾಡಬೇಕು ಎಂಬ ಕನಸನ್ನು ಹೊಂದಿದ್ದೆ’ ಎಂದು ರಚಿತಾ ರಾಮ್ ಹೇಳಿದ್ದಾರೆ.
ರಚಿತಾ ರಾಮ್ ಕನ್ನಡದ ಬೇಡಿಕೆಯ ನಟಿ. ಅವರ ಕೈಯಲ್ಲಿ ಹಲವು ಸಿನಿಮಾ ಆಫರ್ಗಳಿವೆ. ಅವರ ನಟನೆಯ ‘ಲವ್ ಯೂ ರಚ್ಚು’ ಸಿನಿಮಾ ಡಿಸೆಂಬರ್ 31ರಂದು ತೆರೆಗೆ ಬರುತ್ತಿದೆ. ಅದಕ್ಕೂ ಮೊದಲು ರಚಿತಾ ರಾಮ್ ಮಂಗಳೂರಿಗೆ ಭೇಟಿ ನೀಡಿದ್ದಾರೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು ರಚಿತಾಗೆ ಸನ್ಮಾನ ಮಾಡಿದ್ದಾರೆ. ಆ ಬಳಿಕ ಪೊಲೀಸರನ್ನು ಉದ್ದೇಶಿಸಿ ಮಾತನಾಡಿದ ರಚಿತಾ ರಾಮ್, ‘ಕೊವಿಡ್ ಸಾಂಕ್ರಾಮಿಕದ ವೇಳೆ ಪೊಲೀಸರ ಕಾರ್ಯಕ್ಕೆ ನಾನು ಮೆಚ್ಚುಗೆ ಸೂಚಿಸುತ್ತೇನೆ. ನಾನು ಐಪಿಎಸ್ ಮಾಡಬೇಕು ಎಂಬ ಕನಸನ್ನು ಹೊಂದಿದ್ದೆ’ ಎಂದು ಹೇಳಿದ್ದಾರೆ. ಅವರ ಜೊತೆ ಸೆಲ್ಫಿ ತೆಗೆದುಕೊಳ್ಳಲು ಪೊಲೀಸರು ಮುಗಿಬಿದ್ದಿದ್ದಾರೆ.
ರಚಿತಾ ರಾಮ್ ಅವರು ಅಜಯ್ ರಾವ್ ಜತೆಗೆ ‘ಲವ್ ಯೂ ರಚ್ಚು’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಆರಂಭದಲ್ಲಿಯೇ ಸಾಕಷ್ಟು ಸುದ್ದಿ ಮಾಡಿತ್ತು. ಫೈಟರ್ ವಿವೇಕ್ ಅವರು ಶೂಟಿಂಗ್ ವೇಳೆ ಹೈ ವೋಲ್ಟೇಜ್ ತಂತಿ ಸ್ಪರ್ಶಿಸಿ ಮೃತಪಟ್ಟಿದ್ದರು. ಈ ಪ್ರಕರಣದಿಂದ ಸಿನಿಮಾ ತಂಡದ ಕೆಲವರು ಅರೆಸ್ಟ್ ಕೂಡ ಆಗಿದ್ದರು. ಈ ಘಟನೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಈಗ ಸಿನಿಮಾ ಟ್ರೇಲರ್ ಮೂಲಕ ಸದ್ದು ಮಾಡುತ್ತಿದೆ.
ಇದನ್ನೂ ಓದಿ: ‘ಪ್ರೀತಿ ತೋರಿಸೋ ನಮಗೆ ಬೆನ್ನಿಗೆ ಚೂರಿ ಹಾಕೋ ಕೆಲಸ ಮಾಡ್ದಾಗ ಬೇಜಾರಾಗತ್ತೆ’: ರಚಿತಾ ರಾಮ್
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

