ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು

| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 06, 2024 | 10:05 PM

ಕಾಲುವೆ ಸ್ವಚ್ಛ ಮಾಡದೇ ಸಣ್ಣ ನೀರಾವರಿ ಇಲಾಖೆ ನೀರು ಹರಿಬಿಟ್ಟಿದ್ದಕ್ಕೆ ಅಪಾರ ಪ್ರಮಾಣದ ನೀರು ಈರುಳ್ಳಿ ರಾಶಿಗೆ ನುಗ್ಗಿ ಅಪಾರ ಹಾನಿಯಾದ ಘಟನೆ ಗದಗ ಜಿಲ್ಲೆಯ ಮುಂಡರಗಿ(Mundaragi) ತಾಲೂಕಿನ ಡಂಬಳ ಗ್ರಾಮದಲ್ಲಿ ಘಟನೆ ನಡೆದಿದೆ. ನೂರಾರು ಕ್ವಿಂಟಾಲ್ ಈರುಳ್ಳಿ ನೀರು ಪಾಲಾಗಿದ್ದು, ರೈತರು ಕಂಗಾಲಾಗಿದ್ದಾರೆ.

ಗದಗ, ಅ.06: ಕಾಲುವೆ ಸ್ವಚ್ಛ ಮಾಡದೇ ಸಣ್ಣ ನೀರಾವರಿ ಇಲಾಖೆ ನೀರು ಹರಿಬಿಟ್ಟಿದ್ದಕ್ಕೆ ಅಪಾರ ಪ್ರಮಾಣದ ನೀರು ಈರುಳ್ಳಿ ರಾಶಿಗೆ ನುಗ್ಗಿ ಅಪಾರ ಹಾನಿಯಾದ ಘಟನೆ ಗದಗ ಜಿಲ್ಲೆಯ ಮುಂಡರಗಿ(Mundaragi) ತಾಲೂಕಿನ ಡಂಬಳ ಗ್ರಾಮದಲ್ಲಿ ಘಟನೆ ನಡೆದಿದೆ. ನೂರಾರು ಕ್ವಿಂಟಾಲ್ ಈರುಳ್ಳಿ ನೀರು ಪಾಲಾಗಿದ್ದು, ರೈತರು ಕಂಗಾಲಾಗಿದ್ದಾರೆ. ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಅಪಾರ ಪ್ರಮಾಣದ ಈರುಳ್ಳಿ ನೀರು ಪಾಲಾಗಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಟಾವು ಮಾಡಲು ಡಂಬಳ ಗ್ರಾಮದಲ್ಲಿ ನೂರಾರು ಕ್ವಿಂಟಾಲ್ ಈರುಳ್ಳಿ ಅಂಗಳದಲ್ಲಿ ಹಾಕಿದ್ದರು. ಸುಮಾರು 30-40 ರೈತರಿಗೆ ಸೇರಿದ್ದ ಈರುಳ್ಳಿ ಕಾಲುವೆ ಸ್ವಚ್ಛಗೊಳಿಸದೇ ನೀರು ಹರಿಬಿಟ್ಟಿದ್ದಕ್ಕೆ ಕಾಲುವೆ ಬ್ಲಾಕ್ ಆಗಿ ಅಪಾರ ನೀರು ರಸ್ತೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಈರುಳ್ಳಿ ಹಾಳಾಗಿದೆ. ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ ಹೊರಹಾಕಿದ್ದಾರೆ. ನೀರು ಹರಿಯುತ್ತಿದ್ದರೂ ನಿಲ್ಲಿಸಲು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಯತ್ನ ಮಾಡುತ್ತಿಲ್ಲ ಎಂದು ಕಿಡಿಕಾರಿದ್ದಾರೆ. ಸೌಜನ್ಯಕ್ಕೂ ಅಧಿಕಾರಿಗಳು ಗ್ರಾಮಕ್ಕೆ ಆಗಮಿಸಿಲ್ಲ ಎಂದು ರೈತರು ಗರಂ ಆಗಿದ್ದಾರೆ. ಕೈಗೆ ಬಂದ ತುತ್ತು ಬಾಯಿಗೆ ಬಾರದೆ ರೈತರು ಗೋಳಾಡುತ್ತಿದ್ದಾರೆ. ಸಣ್ಣ ನೀರಾವರಿ ಇಲಾಖೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us on