ಅಂಬೂರ್ ಬಿರಿಯಾನಿ ಕಟ್ಟಡ ದಿಢೀರ್ ಕುಸಿತ; ಅವಶೇಷಗಳಡಿ ಸಿಲುಕಿದ್ದ 8 ಕಾರ್ಮಿಕರ ಪೈಕಿ ಇಬ್ಬರ ರಕ್ಷಣೆ
ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪಲು ಪಟ್ಟಣದಲ್ಲಿದ್ದ ಅಂಬೂರ್ ಬಿರಿಯಾನಿ ಕಟ್ಟಡ ಇಂದು(ಗುರುವಾರ) ಮಧ್ಯಾಹ್ನ 12 ಗಂಟೆಗೆ ಸುಮಾರಿಗೆ ದಿಢೀರ್ ಕುಸಿತವಾಗಿದೆ. ಅವಶೇಷಗಳಡಿ ಸಿಲುಕಿದ್ದ 8 ಕಾರ್ಮಿಕರ ಪೈಕಿ ಇಬ್ಬರ ರಕ್ಷಣೆ ಮಾಡಲಾಗಿದೆ. ಇನ್ನುಳಿದ 6 ಕಾರ್ಮಿಕರ ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರೆದಿದೆ.
ಕೊಡಗು, ಜೂ.20: ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪಲು ಪಟ್ಟಣದಲ್ಲಿದ್ದ ಅಂಬೂರ್ ಬಿರಿಯಾನಿ ಕಟ್ಟಡ ಇಂದು(ಗುರುವಾರ) ಮಧ್ಯಾಹ್ನ 12 ಗಂಟೆಗೆ ಸುಮಾರಿಗೆ ದಿಢೀರ್ ಕುಸಿತವಾಗಿದೆ. ಕಟ್ಟಡದಲ್ಲಿ ಎಂಟು ಮಂದಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದ್ದು, ಅವಶೇಷಗಳಡಿ ಸಿಲುಕಿದ್ದ 8 ಕಾರ್ಮಿಕರ ಪೈಕಿ ಇಬ್ಬರ ರಕ್ಷಣೆ ಮಾಡಲಾಗಿದೆ. ಇನ್ನುಳಿದ 6 ಕಾರ್ಮಿಕರ ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರೆದಿದೆ. ಇನ್ನು ರಕ್ಷಿಸಿದ ಇಬ್ಬರು ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ