Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡ: ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಹೊಡೆದಾಟ

ಉತ್ತರ ಕನ್ನಡ: ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಹೊಡೆದಾಟ

ಕಿರಣ್ ಹನುಮಂತ್​ ಮಾದಾರ್
|

Updated on: Aug 31, 2024 | 3:42 PM

ಬಿಜೆಪಿ ಸದಸ್ಯತ್ವ ಅಭಿಯಾನದ ಕುರಿತು ಕಾರ್ಯಕರ್ತರನ್ನ ಉತ್ತರ ಕನ್ನಡ ಜಿಲ್ಲಾಧ್ಯಕ್ಷ  ಎನ್​.ಎಸ್​ ಹೆಗಡೆ ನೇತೃತ್ವದಲ್ಲಿ ಸಭೆ ಕರೆಯಲಾಗಿತ್ತು. ಈ ವೇಳೆ ಸಭೆಯಲ್ಲಿ ಮಾಜಿ ಶಾಸಕ ಸುನೀಲ್ ಹೆಗಡೆ ಬಣ ಹಾಗೂ ಮತ್ತೊಂದು ಬಣಗಳೊಂದಿಗೆ ಗಲಾಟೆ ಸೃಷ್ಟಿಯಾಗಿ ಪರಸ್ಪರ ಬಡಿದಾಡಿಕೊಂಡಿದ್ದಾರೆ.

ಉತ್ತರ ಕನ್ನಡ, ಆ.31: ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಎರಡು ಬಣಗಳ ಮಧ್ಯೆ ಗಲಾಟೆಯಾಗಿ ಪರಸ್ಪರ ಹೊಡೆದಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಗಣೇಶ ಕಲ್ಯಾಣ ಮಂಟಪದಲ್ಲಿ ನಡೆದಿದೆ. ಸದಸ್ಯತ್ವ ಅಭಿಯಾನದ ಕುರಿತು BJP ಕಾರ್ಯಕರ್ತರನ್ನ ಉತ್ತರ ಕನ್ನಡ ಜಿಲ್ಲಾಧ್ಯಕ್ಷ  ಎನ್​.ಎಸ್​ ಹೆಗಡೆ ನೇತೃತ್ವದಲ್ಲಿ ಸಭೆ ಕರೆಯಲಾಗಿತ್ತು. ಈ ವೇಳೆ ಸಭೆಯಲ್ಲಿ ಮಾಜಿ ಶಾಸಕ ಸುನೀಲ್ ಹೆಗಡೆ ಬಣ ಹಾಗೂ ಇನ್ನೊಂದು ಬಣಗಳೊಂದಿಗೆ ಗಲಾಟೆ ಸೃಷ್ಟಿಯಾಗಿ ಪರಸ್ಪರ ಬಡಿದಾಡಿಕೊಂಡಿದ್ದಾರೆ. ಬಿಜೆಪಿ ಸಭೆಗೆ ಬಂದಿದ್ದ ಜಿಲ್ಲಾ ಕಾರ್ಯದರ್ಶಿ ಶಿವಾಜಿ ನರಸಾನಿಗೆ, ‘ನೀನು
ಯಾಕೆ ಬಂದಿದ್ದೀಯಾ ಎಂದು ಸುನೀಲ್ ಹೆಗಡೆ ಬಣದವರು ಆಕ್ರೋಶ ವ್ಯಕ್ತಪಡಿಸಿ ಶಿವಾಜಿ ನರಸಾನಿಯನ್ನ ಎಳೆದಾಡಿ ಥಳಿಸಿದ್ದಾರೆ. ಸಭೆಯಲ್ಲಿ ಗಲಾಟೆ ಆಗ್ತಿದ್ದಂತೆ ಜಿಲ್ಲಾಧ್ಯಕ್ಷ N.S.ಹೆಗಡೆ ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ