Modi in Ukraine: ರಷ್ಯಾ- ಉಕ್ರೇನ್ ಯುದ್ಧ; ಕೈವ್​ನಲ್ಲಿ ಝೆಲೆನ್ಸ್ಕಿಯನ್ನು ತಬ್ಬಿಕೊಂಡ ಪ್ರಧಾನಿ ನರೇಂದ್ರ ಮೋದಿ

|

Updated on: Aug 23, 2024 | 3:37 PM

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಕೈವ್​ನಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಇಂದು ಭೇಟಿಯಾಗಿದ್ದಾರೆ. ಈ ವೇಳೆ ಉಭಯ ನಾಯಕರು ದ್ವಿಪಕ್ಷೀಯ ಸಭೆಗೂ ಮೊದಲು ಪರಸ್ಪರ ಅಪ್ಪಿಕೊಂಡು, ಹಸ್ತಲಾಘವ ನೀಡಿದ್ದಾರೆ.

ಕೈವ್: ಇದೇ ಮೊದಲ ಬಾರಿಗೆ ಉಕ್ರೇನ್​ಗೆ ಭಾರತದ ಪ್ರಧಾನಿಯೊಬ್ಬರು ಭೇಟಿ ನೀಡಿರುವುದರಿಂದ ಇಂದಿನ ಪ್ರಧಾನಿ ನರೇಂದ್ರ ಮೋದಿ ಅವರ ಕೈವ್ ಭೇಟಿ ಭಾರೀ ಮಹತ್ವ ಪಡೆದುಕೊಂಡಿದೆ. ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧ ನಡೆಯುತ್ತಿರುವ ಬೆನ್ನಲ್ಲೇ ಭಾರತದ ಪಿಎಂ ಮೋದಿ ಉಕ್ರೇನ್​ಗೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ತಬ್ಬಿಕೊಂಡು, ಹಸ್ತಲಾಘವ ನೀಡಿದ್ದಾರೆ.

30 ವರ್ಷಗಳ ಹಿಂದೆ ಭಾರತ ಮತ್ತು ಉಕ್ರೇನ್ ನಡುವೆ ರಾಜತಾಂತ್ರಿಕ ಸಂಬಂಧಗಳನ್ನು ಸ್ಥಾಪಿಸಿದ ನಂತರ ದೇಶಕ್ಕೆ ಕಾಲಿಟ್ಟ ಮೊದಲ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಪ್ರಧಾನಿ ಮೋದಿ ಅವರ ಉಕ್ರೇನ್ ಭೇಟಿ ಐತಿಹಾಸಿಕವಾಗಿದೆ. ಈ ಭೇಟಿಯ ವೇಳೆ ಉಕ್ರೇನ್ ಮತ್ತು ರಷ್ಯಾ ನಡುವಿನ ನಡೆಯುತ್ತಿರುವ ಸಂಘರ್ಷಕ್ಕೆ ರಾಜತಾಂತ್ರಿಕ ಪರಿಹಾರಕ್ಕಾಗಿ ಮೋದಿ ಸಲಹೆ ನೀಡುತ್ತಾರೆ ಎಂದು ನಿರೀಕ್ಷಿಸಲಾಗಿದೆ.

ಭಾರತದ ಪ್ರಧಾನಿಯೊಬ್ಬರು ಉಕ್ರೇನ್‌ಗೆ ಮೊದಲ ಬಾರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಭೇಟಿಯಾದರು. ಕೈವ್‌ನಲ್ಲಿ ನಡೆದ ಹುತಾತ್ಮರ ಎಕ್ಸ್‌ಪೋಸಿಷನ್‌ನಲ್ಲಿ ಭೇಟಿಯಾದಾಗ ಪ್ರಧಾನಿ ಮೋದಿ ಮತ್ತು ಝೆಲೆನ್ಸ್‌ಕಿ ತಬ್ಬಿಕೊಂಡು ಕೈಕುಲುಕಿದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us on