ಉತ್ತರ ಕನ್ನಡ: ತುಂಬಿದ ಗೇರುಸೊಪ್ಪ ಡ್ಯಾಂ; 5 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ

|

Updated on: Aug 02, 2024 | 3:19 PM

ನಿರಂತರ ಮಳೆಗೆ ಬಹುತೇಕ ಡ್ಯಾಂಗಳು ತುಂಬಿವೆ. ಅದರಂತೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪದಲ್ಲಿರುವ ಶರಾವತಿ ನದಿ ನೀರಿಗೆ ಅಡ್ಡಲಾಗಿ ಕಟ್ಟಿರುವ ‌ ಗೇರುಸೊಪ್ಪ ಜಲಾಶಯ(Gerusoppa Dam) ಕೂಡ ಭರ್ತಿಯಾಗಿದ್ದು, ಜಲಾಶಯದಿಂದ 5000 ಕ್ಯೂಸೆಕ್ ನೀರು ಹೊರಬಿಡಲಾಗಿದೆ.

ಉತ್ತರ ಕನ್ನಡ, ಆ.02: ಕರ್ನಾಟಕದಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಬಹುತೇಕ ಡ್ಯಾಂಗಳು ತುಂಬಿವೆ. ಅದರಂತೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪದಲ್ಲಿರುವ ಶರಾವತಿ ನದಿ ನೀರಿಗೆ ಅಡ್ಡಲಾಗಿ ಕಟ್ಟಿರುವ ‌ ಗೇರುಸೊಪ್ಪ ಜಲಾಶಯ(Gerusoppa Dam) ಕೂಡ ಭರ್ತಿಯಾಗಿದ್ದು, ಜಲಾಶಯದಿಂದ 5000 ಕ್ಯೂಸೆಕ್ ನೀರು ಹೊರಬಿಡಲಾಗಿದೆ. ಇದರಿಂದ ರಾಜ್ಯದ ಪ್ರಸಿದ್ದ ಜೋಗ ಫಾಲ್ಸ್​ಗೂ ಜೀವ ಕಳೆ ಬಂದಿದೆ. ಇನ್ನು  ತುಂಬಿದ ಲಿಂಗನಮಕ್ಕಿ ಜಲಾಶಯವನ್ನು ನೋಡಲು ಪ್ರವಾಸಿಗರ ದಂಡು ಹರಿದು ಬಂದಿದೆ. ಡ್ಯಾಂ ಮುಂದೆ ನಿಂತು ಸೆಲ್ಫಿ ಕ್ಲಿಕ್ಕಿಸುತ್ತಿದ್ದಾರೆ. ಇನ್ನು ರಾತ್ರಿ ವಿದ್ಯುತ್​ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಜಲಾಶಯದಿಂದ ನದಿಗೆ ನೀರು ಬಿಡುತ್ತಿರುವ ಹಿನ್ನೆಲೆ ‌ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಸದ್ಯ ಜಲಾಶಯದಲ್ಲಿ 47.65 ಅಡಿ ನೀರು ಸಂಗ್ರಹವಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ