ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ ಸಿಗುತ್ತಿದ್ದರೂ ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಆರ್ ಅಶೋಕ್ ವಾಗ್ದಾಳಿ

Updated on: Jul 09, 2025 | 1:59 PM

ಎನ್ಐಎ ದಾಳಿಯಿಂದ ಕರ್ನಾಟಕದ ಜೈಲುಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳು ಬಹಿರಂಗಗೊಂಡಿವೆ. ರಾಜ್ಯ ಗೃಹ ಇಲಾಖೆಯ ನಿರ್ಲಕ್ಷ್ಯದಿಂದ ಉಗ್ರರಿಗೆ ರಾಜಾತಿಥ್ಯ ಸಿಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಉಗ್ರರನ್ನು ಹೊರಹಾಕಲು ಕೂಡಲೇ ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದ್ದಾರೆ. ಜೈಲಿನಲ್ಲಿರುವ ಅಪರಾಧಿಗಳ ಚಲನವಲನದ ಮೇಲೆ ನಿಗಾ ವಹಿಸಬೇಕೆಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಬೆಂಗಳೂರು, ಜುಲೈ 9: ಎನ್ಐಎ ದಾಳಿಯಿಂದ ಕರ್ನಾಟಕದ ಜೈಲುಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳು ನಡೆಯುತ್ತಿರುವುದು ಬಹಿರಂಗಗೊಂಡಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ, ಗೃಹ ಇಲಾಖೆಯ ನಿರ್ಲಕ್ಷ್ಯವನ್ನು ಖಂಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜೈಲಿನಲ್ಲಿರುವ ಉಗ್ರರಿಗೆ ರಾಜಾತಿಥ್ಯ ಸಿಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಅಕ್ರಮ ವಲಸಿಗರನ್ನು ಹೊರಹಾಕಲು ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ. ಜೈಲಿನಲ್ಲಿರುವ ಕೈದಿಗಳ ಚಲನವಲನದ ಬಗ್ಗೆ ನಿಗಾ ವಹಿಸಬೇಕು ಮತ್ತು ಮೊಬೈಲ್ ಫೋನ್‌ಗಳನ್ನು ಜೈಲಿನೊಳಗೆ ತಲುಪುವುದನ್ನು ತಡೆಯಬೇಕೆಂದು ಸಹ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ