AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ ಬೀಚ್​ನಲ್ಲಿ ಪ್ರವಾಸಿಗರ ಹುಚ್ಚಾಟ! ಜಿಲ್ಲಾಡಳಿತ ಆದೇಶಕ್ಕೂ ಡೋಂಟ್​ಕೇರ್​

ಕಾರವಾರ ಬೀಚ್​ನಲ್ಲಿ ಪ್ರವಾಸಿಗರ ಹುಚ್ಚಾಟ! ಜಿಲ್ಲಾಡಳಿತ ಆದೇಶಕ್ಕೂ ಡೋಂಟ್​ಕೇರ್​

ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on:May 26, 2024 | 6:51 PM

Share

ಕಾರವಾರದ ರವೀಂದ್ರನಾಥ ಠಾಗೋರ್ ಕಡಲ ತೀರ (Rabindranath Tagore Beach)ದಲ್ಲಿ ಪ್ರವಾಸಿಗರು ಹುಚ್ಚಾಟ ಮೆರೆಯುತ್ತಿದ್ದಾರೆ. ಈಗಾಗಲೇ ಹವಾಮಾನ ವೈಪರೀತ್ಯದಿಂದ ವೇಗವಾಗಿ ಅಲೆಗಳು ಅಪ್ಪಳಿಸುತ್ತಿದ್ದು, ಸಮುದ್ರ ತೀರದಲ್ಲಿ ಕೆಂಪು ಬಾವುಟ ಹಾಕಿ ಇಳಿಯದಂತೆ ಉತ್ತರ ಕನ್ನಡ (Uttara Kannada) ಜಿಲ್ಲಾಡಳಿತದಿಂದ ಎಚ್ಚರಿಕೆ ನೀಡಲಾಗಿದೆ.

ಉತ್ತರ ಕನ್ನಡ, ಮೇ.26: ಜಿಲ್ಲೆಯ ಕಾರವಾರದ ರವೀಂದ್ರನಾಥ ಠಾಗೋರ್ ಕಡಲ ತೀರ (Rabindranath Tagore Beach)ದಲ್ಲಿ ಪ್ರವಾಸಿಗರು ಹುಚ್ಚಾಟ ಮೆರೆಯುತ್ತಿದ್ದಾರೆ. ಈಗಾಗಲೇ ಹವಾಮಾನ ವೈಪರೀತ್ಯದಿಂದ ವೇಗವಾಗಿ ಅಲೆಗಳು ಅಪ್ಪಳಿಸುತ್ತಿದ್ದು, ಸಮುದ್ರ ತೀರದಲ್ಲಿ ಕೆಂಪು ಬಾವುಟ ಹಾಕಿ ಇಳಿಯದಂತೆ ಉತ್ತರ ಕನ್ನಡ (Uttara Kannada) ಜಿಲ್ಲಾಡಳಿತದಿಂದ ಎಚ್ಚರಿಕೆ ನೀಡಲಾಗಿದೆ. ಆದರೆ, ಜಿಲ್ಲಾಡಳಿತದ ಆದೇಶವನ್ನು ಗಾಳಿಗೆ ತೂರಿದ ಪ್ರವಾಸಿಗರು ಸಮುದ್ರಕ್ಕಿಳಿದು ಉದ್ಧಟತನ ತೋರುತ್ತಿದ್ದಾರೆ. ಅದರಲ್ಲೂ ಇಂದು(ಮೇ.26) ಭಾನುವಾರ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದು, ಅಲೆಗಳ ಅಬ್ಬರವನ್ನು ಲೆಕ್ಕಿಸದೆ ಮಕ್ಕಳ ಜೊತೆ ಸಮುದ್ರಕ್ಕಿಳಿಯುತ್ತಿದ್ದಾರೆ. ಕರಾವಳಿ ಕಾವಲು ಪಡೆ ನೇಮಿಸಿ ಪ್ರವಾಸಿಗರನ್ನು ಎಚ್ಚರಿಸದ ಜಿಲ್ಲಾಡಳಿತ, ಇದೀಗ ನೆಪಮಾತ್ರಕ್ಕೆ ರೆಡ್ ಅಲರ್ಟ್ ಘೋಷಿಸಿ ಕಣ್ಮುಚ್ಚಿ ಕುಳಿತಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: May 26, 2024 06:46 PM