ಹೆಚ್ಡಿ ಕುಮಾರಸ್ವಾಮಿ, ಮಂಜುನಾಥ್ ಗೆಲುವಿಗೆ ಜೆಡಿಎಸ್ ಕಾರ್ಯಕರ್ತರಿಂದ ಉರುಳುಸೇವೆ, ವಿಶೇಷ ಪೂಜೆ
ಇಂದು(ಜೂ.02) ರಾಮನಗರ ಜೆಡಿಎಸ್ ಕಾರ್ಯಕರ್ತರು ಡಾ.ಸಿ.ಎನ್. ಮಂಜುನಾಥ್(CN Manjunath) ಹಾಗೂ ಹೆಚ್.ಡಿ.ಕುಮಾರಸ್ವಾಮಿ(HD Kumaraswamy) ಗೆಲುವಿಗಾಗಿ ಉರುಳುಸೇವೆ ಹಾಗೂ ವಿಶೇಷ ಪೂಜೆ ನಡೆಸಿದ್ದಾರೆ. ಹೌದು, ತಮ್ಮ ನೆಚ್ಚಿನ ನಾಯಕನ ಗೆಲುವಿಗಾಗಿ ಶಕ್ತಿ ದೇವತೆ ಚಾಮುಂಡೇಶ್ವರಿ ಮೊರೆ ಹೋಗಿದ್ದಾರೆ.
ರಾಮನಗರ, ಜೂ.02: ಲೋಕಸಭಾ ಚುನಾವಣೆ ಮುಗಿದಿದೆ. ಅದರಂತೆ ಜೂನ್ 4ರಂದು ಲೋಕಸಭಾ ಚುನಾವಣಾ ಫಲಿತಾಂಶ ಬರಲಿದ್ದು, ಎಲ್ಲರೂ ಕಾತುರದಿಂದ ಇದ್ದಾರೆ. ಈ ಮಧ್ಯೆ ರಾಮನಗರ ಜೆಡಿಎಸ್ ಕಾರ್ಯಕರ್ತರು ಡಾ.ಸಿ.ಎನ್. ಮಂಜುನಾಥ್(CN Manjunath) ಹಾಗೂ ಹೆಚ್.ಡಿ.ಕುಮಾರಸ್ವಾಮಿ(HD Kumaraswamy) ಗೆಲುವಿಗಾಗಿ ಉರುಳುಸೇವೆ ಹಾಗೂ ವಿಶೇಷ ಪೂಜೆ ನಡೆಸಿದ್ದಾರೆ. ಹೌದು, ತಮ್ಮ ನೆಚ್ಚಿನ ನಾಯಕನ ಗೆಲುವಿಗಾಗಿ ಶಕ್ತಿ ದೇವತೆ ಚಾಮುಂಡೇಶ್ವರಿ ಮೊರೆ ಹೋಗಿದ್ದಾರೆ. ಈ ಹಿನ್ನಲೆ ದೇವಾಲಯದ ಆವರಣದಲ್ಲಿ ಉರುಳುಸೇವೆ ಮಾಡಿ, ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಷ್ಟೇ ಅಲ್ಲ, 101 ಈಡುಗಾಯಿ ಓಡೆದು ಬೆಂಗಳೂರು ಗ್ರಾಮಾಂತರದಲ್ಲಿ ಡಾ. ಸಿ. ಎನ್. ಮಂಜುನಾಥ್ ಹಾಗೂ ಮಂಡ್ಯದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರು ಗೆಲ್ಲಲಿ ಎಂದು ಪ್ರಾರ್ಥನೆ ಮಾಡಿದ್ದಾರೆ. ಜೊತೆಗೆ ಕೇಂದ್ರದಲ್ಲಿ ಇಬ್ಬರಿಗೂ ಸಚಿವ ಸ್ಥಾನ ಸಿಗಲಿ ಎಂದು ಘೋಷಣೆ ಕೂಗಿ, ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿ ಎಂದು ಹರಕೆ ಹೊತ್ತಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
