ಹೆಚ್​ಡಿ ಕುಮಾರಸ್ವಾಮಿ, ಮಂಜುನಾಥ್​ ಗೆಲುವಿಗೆ ಜೆಡಿಎಸ್​ ಕಾರ್ಯಕರ್ತರಿಂದ ಉರುಳುಸೇವೆ, ವಿಶೇಷ ಪೂಜೆ

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ Edited By: ಕಿರಣ್ ಹನುಮಂತ್​ ಮಾದಾರ್

Updated on: Jun 02, 2024 | 2:24 PM

ಇಂದು(ಜೂ.02) ರಾಮನಗರ ಜೆಡಿಎಸ್ ಕಾರ್ಯಕರ್ತರು ಡಾ.ಸಿ.ಎನ್​. ಮಂಜುನಾಥ್(CN Manjunath) ಹಾಗೂ ಹೆಚ್.ಡಿ.ಕುಮಾರಸ್ವಾಮಿ(HD Kumaraswamy) ಗೆಲುವಿಗಾಗಿ ಉರುಳುಸೇವೆ ಹಾಗೂ ವಿಶೇಷ ಪೂಜೆ ನಡೆಸಿದ್ದಾರೆ. ಹೌದು, ತಮ್ಮ ನೆಚ್ಚಿನ ನಾಯಕನ ಗೆಲುವಿಗಾಗಿ ಶಕ್ತಿ ದೇವತೆ ಚಾಮುಂಡೇಶ್ವರಿ ಮೊರೆ ಹೋಗಿದ್ದಾರೆ.

ರಾಮನಗರ, ಜೂ.02: ಲೋಕಸಭಾ ಚುನಾವಣೆ ಮುಗಿದಿದೆ. ಅದರಂತೆ ಜೂನ್ 4ರಂದು ಲೋಕಸಭಾ ಚುನಾವಣಾ ಫಲಿತಾಂಶ ಬರಲಿದ್ದು, ಎಲ್ಲರೂ ಕಾತುರದಿಂದ ಇದ್ದಾರೆ. ಈ ಮಧ್ಯೆ ರಾಮನಗರ ಜೆಡಿಎಸ್ ಕಾರ್ಯಕರ್ತರು ಡಾ.ಸಿ.ಎನ್​. ಮಂಜುನಾಥ್(CN Manjunath) ಹಾಗೂ ಹೆಚ್.ಡಿ.ಕುಮಾರಸ್ವಾಮಿ(HD Kumaraswamy) ಗೆಲುವಿಗಾಗಿ ಉರುಳುಸೇವೆ ಹಾಗೂ ವಿಶೇಷ ಪೂಜೆ ನಡೆಸಿದ್ದಾರೆ. ಹೌದು, ತಮ್ಮ ನೆಚ್ಚಿನ ನಾಯಕನ ಗೆಲುವಿಗಾಗಿ ಶಕ್ತಿ ದೇವತೆ ಚಾಮುಂಡೇಶ್ವರಿ ಮೊರೆ ಹೋಗಿದ್ದಾರೆ. ಈ ಹಿನ್ನಲೆ ದೇವಾಲಯದ ಆವರಣದಲ್ಲಿ ಉರುಳುಸೇವೆ ಮಾಡಿ, ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಷ್ಟೇ ಅಲ್ಲ, 101 ಈಡುಗಾಯಿ ಓಡೆದು ಬೆಂಗಳೂರು ಗ್ರಾಮಾಂತರದಲ್ಲಿ ಡಾ. ಸಿ. ಎನ್. ಮಂಜುನಾಥ್ ಹಾಗೂ ಮಂಡ್ಯದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರು ಗೆಲ್ಲಲಿ ಎಂದು ಪ್ರಾರ್ಥನೆ ಮಾಡಿದ್ದಾರೆ. ಜೊತೆಗೆ ಕೇಂದ್ರದಲ್ಲಿ ಇಬ್ಬರಿಗೂ ಸಚಿವ ಸ್ಥಾನ ಸಿಗಲಿ ಎಂದು ಘೋಷಣೆ ಕೂಗಿ, ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿ ಎಂದು ಹರಕೆ ಹೊತ್ತಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ