ಭಾರೀ ಗಾಳಿಗೆ ಅಂಗಡಿಗಳ ಮೇಲೆ ಉರುಳಿ ಬಿದ್ದ ಮೊಬೈಲ್ ಟವರ್; ತಪ್ಪಿದ ಭಾರಿ ಅನಾಹುತ
ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ದರೂರು ಗ್ರಾಮದಲ್ಲಿ ಭಾರೀ ಗಾಳಿಗೆ ಬೃಹತ್ ಗಾತ್ರದ ಮೊಬೈಲ್ ಟವರ್ ರಸ್ತೆಗೆ ಅಡ್ಡಲಾಗಿ ನೆಲಕ್ಕೆ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನು ಘಟನೆಯಲ್ಲಿ ಅಂಗಡಿ ಹಾಗೂ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ.
ಬಳ್ಳಾರಿ, ಜು.18: ಭಾರೀ ಗಾಳಿಗೆ ಬೃಹತ್ ಗಾತ್ರದ ಮೊಬೈಲ್ ಟವರ್ ರಸ್ತೆಗೆ ಅಡ್ಡಲಾಗಿ ನೆಲಕ್ಕೆ ಉರುಳಿ ಬಿದ್ದ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ದರೂರು ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ. ಇಂದು (ಗುರುವಾರ) ಸಂಜೆ ಏಕಾಏಕಿ ಬೀಸಿದ ಭಾರಿ ಗಾಳಿಗೆ ಟವರ್ವೊಂದು ಅಂಗಡಿಗಳ ಮೇಲೆ ಬಿದ್ದಿದ್ದು, ಅಂಗಡಿ ಹಾಗೂ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಈ ವೇಳೆ ಸ್ಥಳದಲ್ಲಿ ಯಾರೂ ಇಲ್ಲದ್ದರಿಂದ ಅವಘಡ ತಪ್ಪಿದೆ. ಟವರ್ ಕಂಬ ತೆರವು ಗೊಳಿಸಲು ಗ್ರಾಮಸ್ಥರು ಹರಸಾಹಸ ಪಡುತ್ತಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನು ಮಳೆಗಾಲ ಹಿನ್ನಲೆ ಆದಷ್ಟು ಜಾಗೃತವಾಗಿರುವುದು ಉಳಿತು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ