ಮಂಗಳೂರು: ಕುಡುಕರ ಹಾವಳಿ ತಡೆಯಲು ಕುಡಿದೇ ಬಂದ್ರಾ ಪೊಲೀಸರು? ವಿಡಿಯೋ ವೈರಲ್​

ಮಂಗಳೂರು: ಕುಡುಕರ ಹಾವಳಿ ತಡೆಯಲು ಕುಡಿದೇ ಬಂದ್ರಾ ಪೊಲೀಸರು? ವಿಡಿಯೋ ವೈರಲ್​
|

Updated on: Jul 11, 2024 | 6:21 PM

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ (Sullia) ತಾಲೂಕಿನ ಗುತ್ತಿಗಾರಿ ಎಂಬಲ್ಲಿ ಕುಡುಕರ ಹಾವಳಿ ತಡೆಯಲು ಮಹಿಳೆಯೋರ್ವಳು ರಕ್ಷಣೆ ಕೋರಿ 112 ಗೆ ಕರೆ ಮಾಡಿದ್ದರು. ಆದರೆ, ಕುಡುಕರ ಹಾವಳಿ ತಡೆಯಲು ಬಂದ ಪೊಲೀಸರೇ ಎಣ್ಣೆ ಹೊಡೆದು ಡ್ಯೂಟಿಗೆ ಬಂದ ಘಟನೆ ನಡೆದಿದ್ದು, ಸ್ಥಳೀಯರು ಪೊಲೀಸರಿಗೆ ಬುದ್ದಿವಾದ ಹೇಳುವ ವೀಡಿಯೋ ವೈರಲ್​ ಆಗಿದೆ.

ದಕ್ಷಿಣ ಕನ್ನಡ, ಜು.11: ಕುಡುಕರ ಹಾವಳಿ ತಡೆಯಲು ಪೊಲೀಸ(Police)ರೇ ಎಣ್ಣೆ ಹೊಡೆದು ಡ್ಯೂಟಿಗೆ ಬಂದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ (Sullia) ತಾಲೂಕಿನ ಗುತ್ತಿಗಾರಿ ಎಂಬಲ್ಲಿ ನಡೆದಿದೆ. ಹೊಯ್ಸಳ ವಾಹನದಲ್ಲಿ ಕುಡಿದು ಕರ್ತವ್ಯ ನಿರ್ವಹಣೆ ಮಾಡುತ್ತಿದ್ದ ಶಂಕೆ ಮೇಲೆ ಅನುಮಾನ ಬಂದ ಸ್ಥಳೀಯರು ಪ್ರಶ್ನಿಸಿದ್ದಾರೆ. ಜೊತೆಗೆ ಪೊಲೀಸರಿಗೆ ಬುದ್ದಿವಾದ ಹೇಳುವ ವೀಡಿಯೋ ವೈರಲ್​ ಆಗಿದೆ. ಇಂದು(ಜು.11) ಕುಡಿದು ಬಸ್ ಸ್ಟ್ಯಾಂಡ್​ನಲ್ಲಿ ಬಾಟಲಿ ಒಡೆದು ಮಲಗಿದ್ದ ಕುಡುಕರ ಹಾವಳಿ ತಡೆಯಲು ಮಹಿಳೆಯೋರ್ವಳು ರಕ್ಷಣೆ ಕೋರಿ 112 ಗೆ ಕರೆ ಮಾಡಿದ್ದರು. ಈ ವೇಳೆ ಓರ್ವ ಎ.ಎಸ್.ಐ ಮತ್ತು ಡ್ರೈವರ್ ಆಗಮಿಸಿದ್ದರು. ಆದರೆ, ಕುಡುಕರ ಮೇಲೆ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ತೋರಿದ್ದಾರೆ. ಈ ವೇಳೆ ಅನುಮಾನ ಬಂದು ಸ್ಥಳೀಯರು ಪ್ರಶ್ನಿಸಿದಾಗ ಪೊಲೀಸರೇ ಕುಡಿದು ಬಂದಿರುವುದು ಬೆಳಕಿಗೆ ಬಂದಿದೆ.

ಕುಡಿದು ವಾಹನ ಚಾಲನೆ ಮಾಡಬೇಡಿ‌ ಎಂದ ಸ್ಥಳೀಯರು

ಇನ್ನು ಕುಡಿದು ವಾಹನ ಚಾಲನೆ ಮಾಡಬೇಡಿ‌. ಪೊಲೀಸ್ ಜೀಪ್ ಇಲ್ಲೇ ಬಿಟ್ಟು ಹೋಗಿ ಎಂದು ಸ್ಥಳೀಯರು ಹೇಳಿದ್ದಾರೆ. ಇದಕ್ಕೆ ಉತ್ತರಿಸಿದ ಪೊಲೀಸರು, ‘ ನಾವು ಸುಳ್ಯ ಪೊಲೀಸ್ ಠಾಣೆಯಿಂದ ಬಂದಿದ್ದು, ಡೈಲಿ ಕುಡಿಯುತ್ತೇವೆ. ಆದ್ರೆ, ಈಗ ಕುಡಿದಿಲ್ಲ, ಪಾರ್ಸೆಲ್ ತಗೊಂಡಿದ್ದೇವೆ ಎಂದು ಹೇಳಿದ್ದಾರೆ. ಇದೇ ವೇಳೆ ‘ನನಗೆ ಆರೋಗ್ಯ ಸರಿ ಇಲ್ಲ ಎಂದು ಪೊಲೀಸ್ ವಾಹನ ಚಾಲಕ ಹೇಳಿದ್ದಾನೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ