ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಸುರತ್ಕಲ್ನ ಕಾಟಿಪಳ್ಳ, ಕೃಷ್ಣಾಪುರ ಭಾಗದಲ್ಲಿ ಮಳೆಯ ಜೊತೆಗೆ ಸುಂಟರಗಾಳಿ ಬೀಸಿದ್ದು, ಮನೆಯ ಮೇಲ್ಛಾವಣಿ ಹಾರಿಹೋಗಿದೆ. ಜೊತೆಗೆ ವಿದ್ಯುತ್ ಕಂಬ ಹಾಗೂ ಬೃಹತ್ ಮರಗಳು ಧರೆಗೆ ಉರುಳಿದೆ. ಭಯಾನಕ ಸುಂಟರಗಾಳಿಯ ದೃಶ್ಯ, ಸ್ಥಳೀಯರ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ.
ದಕ್ಷಿಣ ಕನ್ನಡ, ಜು.26: ಕರ್ನಾಟಕದ ಹಲವೆಡೆ ವರುಣಾರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಅದರಲ್ಲೂ ಕರಾವಳಿ ಭಾಗಗಳಲ್ಲಿ ದೊಡ್ಡ ಅವಾಂತರವನ್ನೇ ಸೃಷ್ಟಿ ಮಾಡಿದೆ. ಅದರಂತೆ ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಸುರತ್ಕಲ್ನ ಕಾಟಿಪಳ್ಳ, ಕೃಷ್ಣಾಪುರ ಭಾಗದಲ್ಲಿ ಮಳೆಯ ಜೊತೆಗೆ ಸುಂಟರಗಾಳಿ ಬೀಸಿದ್ದು, ಮನೆಯ ಮೇಲ್ಛಾವಣಿ ಹಾರಿಹೋಗಿದೆ. ಜೊತೆಗೆ ವಿದ್ಯುತ್ ಕಂಬ ಹಾಗೂ ಬೃಹತ್ ಮರಗಳು ಧರೆಗೆ ಉರುಳಿದೆ. ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಬಿರುಗಾಳಿ ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದೆ. ಇನ್ನು ಭಯಾನಕ ಸುಂಟರಗಾಳಿಯ ದೃಶ್ಯ, ಸ್ಥಳೀಯರ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಷ್ಟೇ ಅಲ್ಲದೆ ಭಾರಿ ಮಳೆಯಿಂದಾಗಿ ಮಂಗಳೂರು ಬಳಿ ಮನೆ ಕುಸಿತವಾಗಿದೆ. ಮನೆಯಲ್ಲಿ ಯಾರೂ ಇಲ್ಲದಿದ್ದರಿಂದ ದುರಂತ ತಪ್ಪಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ