ಕಳೆದ 20 ತಿಂಗಳಲ್ಲಿ ಸಿದ್ದರಾಮಯ್ಯ ಡೀಸೆಲ್ ಬೆಲೆ ₹ 5.50 ಮತ್ತು ಪೆಟ್ರೋಲ್ ಬೆಲೆ ₹ 3 ಹೆಚ್ಚಿಸಿದ್ದಾರೆ: ವಿಜಯೇಂದ್ರ
ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ನಡೆ ಕೃಷ್ಣಾದೆಡೆ ಎಂದು ಹೇಳಿತ್ತು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಪ್ರತಿವರ್ಷ ₹10,000 ಕೋಟಿ ಮೀಸಲಿಡುವುದಾಗಿ ಹೇಳಿದ್ದರು, ಹಾಗೆ ಮಾಡಿದ್ದಾರಾ? ಉತ್ತರ ಕರ್ನಾಟಕದ ಅಭಿವೃದ್ಧಿ ಕೆಲಸ ಅಕ್ಷರಶಃ ನಿಂತುಹೋಗಿವೆ, ತಮ್ಮ ಕೆಲಸಗಳ ಬಗ್ಗೆ ಸಿದ್ದರಾಮಯ್ಯ ಮಾತಾಡಲಿ ಎಂದು ವಿಜಯೇಂದ್ರ ಹೇಳಿದರು.
ಬೆಳಗಾವಿ, ಏಪ್ರಿಲ್ 15: ಬೆಲೆಯೇರಿಕೆ ಮತ್ತು ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರುವ ಹೋರಾಟ ಮುಂದುವರಿದಿದೆ. ಇಂದು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸುವಾಗ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಭಟನೆ ನಡೆಸಲು ಬಿಜೆಪಿಗೆ ನೈತಿಕ ಹಕ್ಕಿಲ್ಲ ಎಂದು ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡುತ್ತಾ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಿಸಿದರೂ ಜನಸಾಮಾನ್ಯರ ಮೇಲೆ ಹೊರೆ ಹಾಕಿಲ್ಲ, ತೈಲ ಕಂಪನಿಗಳೇ ಅದನ್ನು ಭರಿಸುತ್ತಿವೆ, ಆದರೆ ಸಿದ್ದರಾಮಯ್ಯನವರ ಸರ್ಕಾರ ಅಧಿಕಾರ 20 ತಿಂಗಳಲ್ಲಿ ಡೀಸೆಲ್ ಬೆಲೆ ₹5.50 ಮತ್ತು ಪೆಟ್ರೋಲ್ ಬೆಲೆ ₹ 3 ಜಾಸ್ತಿ ಮಾಡಿದೆ ಎಂದು ಹೇಳಿದರು.
ಇದನ್ನೂ ಓದಿ: ದೇಶದಲ್ಲಿ ದಲಿತರ ಪರ ನಿಂತಿರೋದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ: ಬಿವೈ ವಿಜಯೇಂದ್ರ
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ