ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ, ಮುಖ್ಯಮಂತ್ರಿಗಳನ್ನು ಭೇಟಿಯಾದ ರಮೇಶ್ ಜಾರಕಿಹೊಳಿ ಮತ್ತು ಸಿಪಿ ಯೊಗೇಶ್ವರ್

Edited By:

Updated on: Oct 18, 2022 | 1:56 PM

ಸಂಪುಟ ವಿಸ್ತರಣೆ ಕುರಿತಂತೆ ವರಿಷ್ಠರೊಡನೆ ಚರ್ಚೆ ನಡೆಸಲು ಮುಖ್ಯಮಂತ್ರಿಗಳು ವಾರಾಂತ್ಯದಲ್ಲಿ ದೆಹಲಿಗೆ ತೆರಳುವ ನಿರೀಕ್ಷೆಯಿದೆ.

ಬೆಂಗಳೂರು:  ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯ ಸುದ್ದಿ ಕಿವಿಗೆ ಬೀಳುತ್ತಿದ್ದಂತೆ ಸಚಿವ ಸ್ಥಾನದಲ್ಲರಿವವರು ಎಲ್ಲಿ ಮಂತ್ರಿಗಿರಿ ತಪ್ಪಿಹೋಗುತ್ತೋ ಅಂತ ದಿಗಿಲುಗೊಂಡಿದ್ದರೆ ಸಚಿವಾಕಾಂಕ್ಷಿಗಳು ಚುರುಕಿನಿಂದ ಓಡಾಡಲು ಪ್ರಾರಂಭಿಸಿದ್ದಾರೆ. ಮಾಜಿ ಸಚಿವರು ರಮೇಶ ಜಾರಕಿಹೊಳಿ (Ramesh Jarkiholi) ಮತ್ತು ಸಿಪಿ ಯೋಗೇಶ್ವರ್ (CP Yogeshwar) ಅವರು ಮಂಗಳವಾವರದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾದರು. ಭೇಟಿಯಾದ ಕಾರಣವನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಸಂಪುಟ ವಿಸ್ತರಣೆ ಕುರಿತಂತೆ ವರಿಷ್ಠರೊಡನೆ ಚರ್ಚೆ ನಡೆಸಲು ಮುಖ್ಯಮಂತ್ರಿಗಳು ವಾರಾಂತ್ಯದಲ್ಲಿ ದೆಹಲಿಗೆ ತೆರಳುವ ನಿರೀಕ್ಷೆಯಿದೆ.