ದೂರುಗಳ ಹಿನ್ನೆಲೆಯಲ್ಲಿ ಆಹಾರ ಸುರಕ್ಷೆ ಮತ್ತು ಔಷಧ ನಿಯಂತ್ರಣ ಇಲಾಖೆಗಳ ವಿಲೀನ ಅನಿವಾರ್ಯ: ದಿನೇಶ್ ಗುಂಡೂರಾವ್

Updated on: Dec 14, 2024 | 2:03 PM

ಅಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ-ಎರಡು ಇಲಾಖೆಗಳನ್ನು ವಿಲೀನ ಮಾಡುವ ಯೋಚನೆ ಬಹಳ ದಿನಗಳಿಂದ ಇತ್ತು, ಇದಕ್ಕೆ ಸಂಬಂಧಪಟ್ಟ ಕಾನೂನು ಪ್ರಕ್ರಿಯೆ ಜಾರಿಯಲ್ಲಿದೆ, ಇಲಾಖೆಗಳನ್ನು ಒಬ್ಬ ಕಮೀಶನರ್ ಅಧೀನಕ್ಕೆ ಒಳಪಡಿಸಿ ಆಡಳಿತಾತ್ಮಕ ವ್ಯವಸ್ಥೆಯನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಸಾಗುತ್ತಿದ್ದೇವೆ, ಔಷಧಿಗಳ ಗುಣಮಟ್ಟದ ಬಗ್ಗೆ ದೂರುಗಳು ಬರುತ್ತಿರುವುದರಿಂದ ಇದು ಅನಿವಾರ್ಯವಾಗಿತ್ತು ಎಂದು ಸಚಿವ ಹೇಳಿದರು.

ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೈದರಾಬಾದ್​​ನಲ್ಲಿ ನಟ ಅಲ್ಲು ಅರ್ಜುನ್ ಅವರ ಬಂಧನ ಬಗ್ಗೆ ತನಗೆ ಹೆಚ್ಚು ಮಾಹಿತಿ ಇಲ್ಲ, ಘಟನೆ ಹೇಗೆ ನಡೆಯಿತು, ಯಾಕೆ ನಡೆಯಿತು ಅನ್ನೋದರ ಬಗ್ಗೆ ಮಾಹಿತಿ ಇದ್ದಿದ್ದರೆ ಮಾತಾಡಬಹುದಿತ್ತು, ನಟನ ವಿರುದ್ಧ ಯಾರೋ ದೂರು ಸಲ್ಲಿಸಿದ್ದಾರೆ ಮತ್ತು ದೂರಿನ ಆಧಾರದ ಮೇಲೆ ಅವರನ್ನು ಬಂಧಿಸಿ ಇವತ್ತು ಬಿಡುಗಡೆ ಮಾಡಲಾಗಿದ್ದು ಅವರು ಮನೆಗೂ ಕೂಡ ವಾಪಸ್ಸು ಬಂದಿದ್ದಾರೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಭ್ರಷ್ಟರಿಗಿಂತ ಅಲ್ಲು ಅರ್ಜುನ್ ಎಷ್ಟೋ ವಾಸಿ: ತೆಲಂಗಾಣ ಸಿಎಂಗೆ ಕೇಂದ್ರ ಸಚಿವ ಬಂಡಿ ಸಂಜಯ್ ತಿರುಗೇಟು

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More