AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC World Cup 2023: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯಲಿರುವ ಆಸ್ಟ್ರೇಲಿಯ-ಪಾಕಿಸ್ತಾನ ವಿಶ್ವಕಪ್ ಪಂದ್ಯಕ್ಕೆ ಬಿಗಿ ಪೊಲೀಸ್ ಭದ್ರತೆ

ICC World Cup 2023: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯಲಿರುವ ಆಸ್ಟ್ರೇಲಿಯ-ಪಾಕಿಸ್ತಾನ ವಿಶ್ವಕಪ್ ಪಂದ್ಯಕ್ಕೆ ಬಿಗಿ ಪೊಲೀಸ್ ಭದ್ರತೆ

ಅರುಣ್​ ಕುಮಾರ್​ ಬೆಳ್ಳಿ
|

Updated on: Oct 18, 2023 | 11:32 AM

Share

ICC World Cup 2023: ಹಮಾಸ್ ಮತ್ತು ಇಸ್ರೇಲ್ ಸೇನೆಯ ನಡುವೆ ಭೀಕರ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೆಲ ಸ್ಥಳೀಯ ಸಂಘಟನೆಗಳು ಪ್ಯಾಲೆಸ್ಟೀನ್ ಗೆ ಬೆಂಬಲ ಸೂಚಿಸುತ್ತಿವೆ ಮತ್ತು ಅದನ್ನು ಪ್ರದರ್ಶಿಸಲು ಸೂಕ್ತ ವೇದಿಕೆಯ ತಲಾಶ್ ನಲ್ಲಿವೆ. ವಿಶ್ವಕಪ್ ಟೂರ್ನಿಯ ಪಂದ್ಯಕ್ಕಿಂತ ದೊಡ್ಡದೆನಿಸುವ ವೇದಿಕೆ ಎಲ್ಲಿ ಸಿಕ್ಕೀತು? ಹಾಗಾಗೇ, ಮುಂಜಾಗ್ರತೆಯ ಕ್ರಮವಾಗಿ ಮತ್ತು ಪಂದ್ಯದ ವೇಳೆ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಚಿನ್ನಸ್ವಾಮಿ ಸ್ಟೇಡಿಯಂ ಸುತ್ತ ಬಿಗಿ ಪೊಲೀಸ್ ಭದ್ರೆ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರು: ಐಸಿಸಿ ವಿಶ್ವಕಪ್ 23 ರಂಗೇರಿದೆ. ಭಾರತ (Team India) ತಾನಾಡಿದ ಎಲ್ಲ ಪಂದ್ಯಗಳನ್ನು ಗೆದ್ದು ಪಾಯಿಂಟ್ಸ್ ಟೇಬಲ್ ನಲ್ಲಿ ಅಗ್ರಸ್ಥಾನದಲ್ಲಿದೆ. ಅಕ್ಟೋಬರ್ 20 ರಂದು ನಗರದ ಚಿನ್ನಸ್ವಾಮಿ ಸ್ಟೇಡಿಯಂಲ್ಲಿ (M Chinnaswamy Stadium) ಪಾಕಿಸ್ತಾನ ಮತ್ತು ಆಸ್ಟ್ರೇಲಿಯ (Pakistan vs Australia ) ನಡುವೆ ಪಂದ್ಯ ನಡೆಯಲಿದೆ. ಎರಡು ತಂಡಗಳಿಗೂ ಇದು ಮಹತ್ವದ ಪಂದ್ಯ. ಆಡಿರುವ ಮೂರು ಪಂದ್ಯಗಳಲ್ಲಿ 1 ಸೋತು 2 ಗೆದ್ದಿರುವ ಪಾಕಿಸ್ತಾನದ ಬಳಿ 4 ಪಾಯಿಂಟ್ ಗಳಿದ್ದರೆ ಅಷ್ಟೇ ಪಂದ್ಯಗಳಲ್ಲಿ 2 ಸೋತು ಒಂದು ಗೆದ್ದಿರುವ 5 ಬಾರಿ ಚಾಂಪಿಯನ್ಸ್ ಕಾಂಗರೂಗಳು ಕೇವಲ 2 ಪಾಯಿಂಟ್ ಹೊಂದಿದ್ದಾರೆ. ಶುಕ್ರವಾರ ಪಂದ್ಯಕ್ಕಾಗಿ ಚಿನ್ನಸ್ವಾಮಿ ಸ್ಟೇಡಿಯಂಗೆ ಭಾರೀ ಭದ್ರತೆಯನ್ನು ಕಲ್ಪಿಸಲಾಗಿದೆ. ಹಮಾಸ್ ಮತ್ತು ಇಸ್ರೇಲ್ ಸೇನೆಯ ನಡುವೆ ಭೀಕರ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೆಲ ಸ್ಥಳೀಯ ಸಂಘಟನೆಗಳು ಪ್ಯಾಲೆಸ್ಟೀನ್ ಗೆ ಬೆಂಬಲ ಸೂಚಿಸುತ್ತಿವೆ ಮತ್ತು ಅದನ್ನು ಪ್ರದರ್ಶಿಸಲು ಸೂಕ್ತ ವೇದಿಕೆಯ ತಲಾಶ್ ನಲ್ಲಿವೆ. ವಿಶ್ವಕಪ್ ಟೂರ್ನಿಯ ಪಂದ್ಯಕ್ಕಿಂತ ದೊಡ್ಡದೆನಿಸುವ ವೇದಿಕೆ ಎಲ್ಲಿ ಸಿಕ್ಕೀತು? ಹಾಗಾಗೇ, ಮುಂಜಾಗ್ರತೆಯ ಕ್ರಮವಾಗಿ ಮತ್ತು ಪಂದ್ಯದ ವೇಳೆ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಚಿನ್ನಸ್ವಾಮಿ ಸ್ಟೇಡಿಯಂ ಸುತ್ತ ಬಿಗಿ ಪೊಲೀಸ್ ಭದ್ರೆ ವ್ಯವಸ್ಥೆ ಮಾಡಲಾಗಿದೆ. ಪಂದ್ಯ ವೀಕ್ಷಿಸಲು ಆಗಮಿಸುವ ಪ್ರತಿಯೊಬ್ಬ ವ್ಯಕ್ತಿಯ ಸೂಕ್ತ ತಪಾಸಣೆಯನ್ನು ಪೊಲೀಸರು ನಡೆಸಲಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ