ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 29, 2024 | 7:03 PM

ಮಂಗಳೂರಿನ ಬೆಳ್ತಂಗಡಿ ತಾಲೂಕಿನ ಉಜಿರೆ(Ujire)ಯಲ್ಲಿ ಕಳೆದ ಎರಡು ದಿನಗಳ ಹಿಂದೆ ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಹಲ್ಲೆ ಆರೋಪಿ ಈ ಹಿಂದೆ ಬೆಳ್ತಂಗಡಿ ಹೋಂಗಾರ್ಡ್​ ಮೇಲೆ ಹಲ್ಲೆ ನಡೆಸಿದ್ದ​​ ಎಂದು ಕೂಡ ಕೇಳಿಬಂದಿದೆ.

ದಕ್ಷಿಣ ಕನ್ನಡ, ಜೂ.29: ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ನಡೆಸಿದ ಘಟನೆ ಮಂಗಳೂರಿನ ಬೆಳ್ತಂಗಡಿ ತಾಲೂಕಿನ ಉಜಿರೆ(Ujire)ಯಲ್ಲಿ ಎರಡು ದಿನದ ಹಿಂದೆ ನಡೆದಿದೆ. ಧರ್ಮಸ್ಥಳದ ರೂಪಾ ಎಂಬ ಮಹಿಳೆ, ನವೀನ್ ಕನ್ಯಾಡಿ​ ಎಂಬಾತನಿಗೆ 7 ಲಕ್ಷ ರೂ ಸಾಲ ನೀಡಿದ್ದರು. ಅದೇ ಹಣವನ್ನು ವಾಪಸ್ ಕೇಳಿದ್ದಕ್ಕೆ ಮಹಿಳೆ ರೂಪಾ ಮೇಲೆ ಬಟ್ಟೆ ಅಂಗಡಿಗೆ ನುಗ್ಗಿ ಬಿಜೆಪಿ ಕಾರ್ಯಕರ್ತ ಹಾಗೂ ಹೂವಿನ ವ್ಯಾಪಾರಿಯಾದ ನವೀನ್ ಹಲ್ಲೆ ಮಾಡಿದ್ದಾನೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೂಪಾ

ಉಜಿರೆಯಲ್ಲಿ ಬಟ್ಟೆ ಅಂಗಡಿ ಇಟ್ಟುಕೊಂಡಿದ್ದ ಧರ್ಮಸ್ಥಳದ ಮಹಿಳೆ ರೂಪಾ, ಇದೀಗ ಗಾಯಗೊಂಡು ಉಜಿರೆಯ ಎಸ್‌ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ನವೀನ್​ ಕನ್ಯಾಡಿ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಈ ಹಿಂದೆ ಕೂಡ ನವೀನ್, ಬೆಳ್ತಂಗಡಿ ಹೋಂಗಾರ್ಡ್​ ಮೇಲೆ ಹಲ್ಲೆ ನಡೆಸಿದ್ದ​​ ಎಂದು ಕೇಳಿಬಂದಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us on