ಮುರುಘಾ ಮಠ ಸ್ವಾಮೀಜಿ ಬಂಧನದ ಬಗ್ಗೆ ಯಾವುದೇ ಹೇಳಿಕೆ ನೀಡುವುದು ಸರಿಯಲ್ಲ: ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಗಳು

| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Sep 02, 2022 | 10:42 AM

ಸದ್ಯಕ್ಕೆ ಶ್ರೀಗಳ ಬಂಧನ ಮತ್ತು ಪ್ರಕರಣದ ಬಗ್ಗೆ ಯಾವುದೇ ವ್ಯಾಖ್ಯಾನ ನೀಡುವುದು ಸರಿಯಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದರು.

ಮಂಗಳೂರು:  ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿಗಳ (Shivamurthy Swamiji) ಬಂಧನದ ಬಳಿಕ ಪ್ರಥಮ ಬಾರಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೇಳಿಕೆಯೊಂದನ್ನು ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಪೊಲೀಸರಿಗೆ (police) ಮುಕ್ತ ಅವಕಾಶ ನೀಡಲಾಗಿದೆ, ಕಾನೂನು ತನ್ನ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಿದರು. ಸದ್ಯಕ್ಕೆ ಶ್ರೀಗಳ ಬಂಧನ ಮತ್ತು ಪ್ರಕರಣದ ಬಗ್ಗೆ ಯಾವುದೇ ವ್ಯಾಖ್ಯಾನ ನೀಡುವುದು ಸರಿಯಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದರು.