ಮಂಗಳೂರು, ಉಡುಪಿ ಜಿಲ್ಲೆಗಳಲ್ಲಿ ಸತತ ಮಳೆ, ಕೆಲ ಪ್ರವಾಸಿ ತಾಣಗಳಿಗೆ ತೆರಳದಂತೆ ಅರಣ್ಯ ಇಲಾಖೆ ನಿರ್ಬಂಧ

ಮಂಗಳೂರು, ಉಡುಪಿ ಜಿಲ್ಲೆಗಳಲ್ಲಿ ಸತತ ಮಳೆ, ಕೆಲ ಪ್ರವಾಸಿ ತಾಣಗಳಿಗೆ ತೆರಳದಂತೆ ಅರಣ್ಯ ಇಲಾಖೆ ನಿರ್ಬಂಧ

ಅರುಣ್​ ಕುಮಾರ್​ ಬೆಳ್ಳಿ
|

Updated on:Jul 04, 2024 | 5:50 PM

ಈ ಬಾರಿಯ ಮಾನ್ಸೂನ್ ಸೀಸನಲ್ಲಿ ಭರ್ಜರಿಯಾಗಿ ಮಳೆಯಾಗುತ್ತಿದೆ. ಕೇವಲ ಪಶ್ಚಿಮಘಟ್ಟ ಮತ್ತು ಕರಾವಳಿ ಪ್ರದೇಶಗಳಲ್ಲದೆ ರಾಜ್ಯದ ಎಲ್ಲ ಭಾಗಗಳಲ್ಲಿ ವಾಡಿಕೆ ಮತ್ತು ನಿರೀಕ್ಷೆಗಿಂತ ಹೆಚ್ಚು ಮಳೆಯಾಗಿದೆ. ಬಿತ್ತುವ ಕೆಲಸವನ್ನು ಹರ್ಷೋಲ್ಲಾಸಗಳಿಂದ ಮುಗಿಸಿರುವ ರೈತರು ನಿರಾಳತೆಯಿಂದ ವರುಣದೇವನಿಗೆ ಕೈಮುಗಿದು ಕೃತಜ್ಞತೆ ಸಲ್ಲಿಸಿದ್ದಾರೆ.

ದಕ್ಷಿಣ ಕನ್ನಡ: ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಂದೇಸಮ ಮಳೆ ಸುರಿಯುತ್ತಿದೆ ಮತ್ತು ಈ ಪ್ರದೇಶಗಳ ನದಿ ಮತ್ತು ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಎರಡು ಜಿಲ್ಲೆಗಳಲ್ಲಿ ಹಲವಾರು ಪ್ರವಾಸಿ ತಾಣಗಳಿರುವುದರಿಂದ ಮಳೆಗಾಲ ಶುರುವಾದರೂ ಪ್ರವಾಸಿಗರು ಜಿಲ್ಲೆಗಳಿಗೆ ಭೇಟಿ ನೀಡುವುದು ನಿಂತಿಲ್ಲ. ಇದೇ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯು ಸೂಚನೆಯೊಂದನ್ನು ಹೊರಡಿಸಿ ಜಿಲ್ಲೆಯ ಬೆಟ್ಟ ಪ್ರದೇಶಗಳು ಮತ್ತು ಜಲಪಾತಗಳ ಕಡೆ ಹೋಗದಂತೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿದೆ. ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಮಳೆ ಸುರಿಯುವುದು ನಿಲ್ಲುತ್ತಿಲ್ಲ. ನಾವು ಈಗಾಗಲೇ ವರದಿ ಮಾಡಿರುವಂತೆ ಕರಾವಳಿ ಪ್ರದೇಶದ ನದಿಗಳಾದ ನೇತ್ರಾವತಿ, ಕುಮಾರಧಾರ, ನಂದಿನಿ ಮೊದಲಾದ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ ಹಾಗೂ ಕೆಲ ಸೇತುವೆಗಳು ಮುಳುಗಡೆಯಾಗಿವೆ. ಯುವಕರು ಹುಚ್ಚು ಸಾಹಸಗಳನ್ನು ಮಾಡುವ ಪ್ರವೃತ್ತಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಅರಣ್ಯ ಇಲಾಖೆ ಸೂಚನೆಯನ್ನು ಹೊರಡಿಸಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   Karnataka Rains: ಕರ್ನಾಟಕದ ಕರಾವಳಿ ಸೇರಿ 9 ಜಿಲ್ಲೆಗಳಲ್ಲಿ ಜುಲೈ 8ರವರೆಗೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ

Published on: Jul 04, 2024 10:54 AM