Mangalore News: ಸೌಜನ್ಯ ಕೇಸ್ ಮರುತನಿಖೆಗೆ ಹೆಚ್ಚಾದ ಆಗ್ರಹ; ಮಂಗಳೂರಲ್ಲಿ ಪ್ರತಿಕ್ರಿಯಿಸದ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

Edited By: ಕಿರಣ್ ಹನುಮಂತ್​ ಮಾದಾರ್

Updated on: Aug 01, 2023 | 1:22 PM

ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಿಗೆ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಸೌಜನ್ಯ ಕೇಸ್ ಕುರಿತು ಮಾತನಾಡಿದ್ದಾರೆ.

ಮಂಗಳೂರು, ಆ.1: ಇಂದು ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಿಗೆ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ‘ಸೌಜನ್ಯ ಕೇಸ್ ಸಿಬಿಐಗೆ ಕೊಟ್ಟಿತ್ತು, ಕೋರ್ಟಲ್ಲಿ ಇತ್ತು. ಅವರ ಪೋಷಕರು ‌ಮರು ತನಿಖೆಗೆ ಮನವಿ ಮಾಡಿದ್ದಾರೆ ಎಂದರು. ‘ಮಂಗಳೂರು ಏರ್​ಪೋರ್ಟ್ನಲ್ಲಿ ಮಾತನಾಡಿದ ಸಿಎಂ ‘ಕಾನೂನು ಪ್ರಕಾರ ಏನಾಗಬೇಕು ಎಂದು ನೋಡಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ನಾನು ಲಾಯರ್ ಆಗಿ ಹೇಳೋದಾದ್ರೆ, ಇದರ ಬಗ್ಗೆ ಹೈಕೋರ್ಟ್​ಗೆ ಅಪೀಲ್ ಹೋಗಬೇಕು. ಅವರ ಪೋಷಕರು ಜಡ್ಜ್ ಮೆಂಟ್ ಕಾಪಿ ತಂದು ಕೊಟ್ಟಿದ್ದಾರೆ. ನಾನು ಸಿಬಿಐ ಕೋರ್ಟ್ ಜಡ್ಜ್​ಮೆಂಟ್ ನೋಡಿಲ್ಲ. ಅದರ ಜಡ್ಜ್​ಮೆಂಟ್ ಓದಿ ಅಪೀಲ್​ಗೆ ಅವಕಾಶ ಇದ್ಯಾ ನೋಡುತ್ತೇನೆ ಎಂದರು.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Aug 01, 2023 01:21 PM
Loading...
Unable to load recommendations.
Follow Us
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More